spot_img
Monday, April 27, 2026
spot_img

ರಾಜಧಾನಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್‌ ಬೆದರಿಕೆ : ಸ್ಥಳಕ್ಕೆ ಡಿಸಿಎಂ ಡಿಕೆಶಿ ಭೇಟಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ರಾಜಧಾನಿ ಬೆಂಗಳೂರಿನ 15 ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮಕ್ಕಳನ್ನು ಮನೆಗೆ ಕಳಿಸಲಾಗಿದೆ. ಪೋಷಕರೂ ಆತಂಕಗೊಂಡು ಶಾಲೆ ಬಳಿಗೆ ಓಡೋಡಿ ಬರುತ್ತಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

ಬಾಂಬ್ ಬೆದರಿಕೆ ಸುದ್ದಿ ಹಬ್ಬುತ್ತಿದ್ದಂತೇ ಡಿಸಿಎಂ ಡಿಕೆ ಶಿವಕುಮಾರ್ ಸದಾಶಿವನಗರದ ನ್ಯೂ ಅಕಾಡೆಮಿ ಶಾಲೆಗೆ ಭೇಟಿ ನೀಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದು ಧೈರ್ಯ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತರ ಜೊತೆಯೂ ಮಾತನಾಡಿದ್ದೇನೆ. ಯಾರೂ ಆತಂಕ ಪಡಬೇಕಿಲ್ಲ ಎಂದಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮಕ್ಕಳನ್ನು ಮನೆಗೆ ಕಳಿಸಲಾಗಿದೆ. ಪೋಷಕರೂ ಆತಂಕಗೊಂಡು ಶಾಲೆ ಬಳಿಗೆ ಓಡೋಡಿ ಬರುತ್ತಿದ್ದಾರೆ.

ಹುಸಿ ಬಾಂಬ್ ಕರೆ?

ಇನ್ನು ಇದೇ ವೇಳೆ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಇ-ಮೇಲ್ ಬಂದಿರುವ ಶಾಲೆಗಳಿಗೆ ಪೊಲೀಸರು ತೆರಳಿ ಪರಿಶೀಲಿಸುತ್ತಿದ್ದಾರೆ‌, ಯಾವುದೇ ಕಾರಣಕ್ಕೆ ಆತಂಕ ಪಡುವ ಸ್ಥಿತಿ ಇಲ್ಲ ಎಂದು ಭರವಸೆ ನೀಡಿದ್ದಾರೆ.

ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಮಾತನಾಡಿ, ವಿದ್ಯಾಶಿಲ್ಪ ಶಾಲೆಗೆ ಮೇಲ್ ಬಂದಿದೆ, ಉಳಿದಂತೆ ಎಲ್ಲಾ ಶಾಲೆಗೂ ಬೆದರಿಕೆ ಮೇಲೆ ಫಾರ್ವರ್ಡ್ ಆಗಿದೆ. ಯಾರು ಗಾಬರಿ ಬೀಳುವ ಅಗತ್ಯವಿಲ್ಲ. ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ ಎಂದಿದ್ದಾರೆ.

ಬೆದರಿಕೆ ಇ-ಮೇಲ್

ನೀವು ಇಸ್ಲಾಂ ಮತಕ್ಕೆ ಸೇರಬೇಕು, ಇಲ್ಲದಿದ್ದರೆ ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಮೇಲ್ ನಲ್ಲಿ ಬರೆದಿರುವ ಆಗಂತುಕರು,ನೀವೆಲ್ಲ ಅಲ್ಲಾಹುವಿನ ವಿರೋಧಿಗಳು, ಸಾಯಲು ಸಿದ್ಧರಾಗಿರಿ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!