Sunday, September 8, 2024

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ: ಡಿ.2 ರಂದು ‘ನಾ ಕಂಡಂತೆ ಪೊಲೀಸ್’ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕುಂದಾಪುರ ಶೈಕ್ಷಣಿಕ ವಲಯದ ಕನ್ನಡ ಮಾಧ್ಯಮ ಶಾಲೆಯ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿ ಗಳಿಗೆ ನ.೧೮ರಂದು ನಡೆಸಲಾದ ಪೊಲೀಸ್ ಎಂದರೇ ಭಯವಲ್ಲ ಭರವಸೆ ಎಂಬ ಶೀರ್ಷಿಕೆ ಯಡಿ ನಾ ಕಂಡಂತೆ ಪೊಲೀಸ್ ಎಂಬ ವಿಷಯದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಡಿ.2ರಂದು ಕುಂದಾಪುರ ಬೋರ್ಡ್ ಹೈಸ್ಕೂಲ್ ಕಲಾಮಂದಿರದಲ್ಲಿ ನಡೆಯಲಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಇವರು ಪ್ರಶಸ್ತಿ ಮತ್ತು ಬಹುಮಾನವನ್ನು ವಿತರಿಸಲಿದ್ದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ, ಕುಂದಾಪುರ ಬೋರ್ಡ್ ಹೈಸ್ಕೂಲ್ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ವಿನಯ ಪಾಯಸ್, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಜತ ಮಹೋತ್ಸವ ಸಮಿತಿ ಸಂಚಾಲಕ ಮಹಮ್ಮದ್ ಶರೀಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ತಾಲೂಕಿನ ಎಲ್ಲಾ ಸರಕಾರಿ ಪ್ರೌಢಶಾಲೆ ಮತ್ತು ಅನುದಾನಿತ ಸೇರಿದಂತೆ ಒಟ್ಟು 27 ಶಾಲೆಗಳ ಪೈಕಿ 99 ಮಂದಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆ ಯಲ್ಲಿ ಭಾಗವಹಿಸಿದ್ದು, ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ರೂ.5,000, ದ್ವೀತಿಯ ಸ್ಥಾನ ಪಡೆದ ವಿದ್ಯಾರ್ಥಿಗೆ: ರೂ. 3,000 ತೃತೀಯ ಸ್ಥಾನ ಪಡೆದ ವಿದ್ಯಾರ್ಥಿ ಗೆ: ರೂ. 2,000 ಇದಲ್ಲದೇ 13 ಮಂದಿ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಕರ ನಗದು ಸೇರಿದಂತೆ ಸಮಾಧಾನಕರ ಬಹುಮಾನಗಳಿರುತ್ತದೆ. ಹಾಗೂ ಸ್ಪರ್ಧೆ ಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿ ಗಳಿಗೆ ಪ್ರಮಾಣ ಪತ್ರ ಮತ್ತು ವಿದ್ಯಾಭ್ಯಾಸದ ಪೂರಕವಾದ ಕಿಟ್ ಗಳನ್ನು ನೀಡಲಾಗುತ್ತಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!