spot_img
Monday, April 27, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಮಂಗಳೂರು ವಿ.ವಿ. ಮಟ್ಟದ ಅಂತರ್-ಕಾಲೇಜು ಚೆಸ್ ಪಂದ್ಯಾಟ ಉದ್ಘಾಟನೆ

      ಕುಂದಾಪುರ, ಡಿ.1: ಕ್ರೀಡೆ ಕೇವಲ ದೈಹಿಕವಾದುದಲ್ಲ, ಮನೋಬಲ ಉಳ್ಳವರಲ್ಲಿ ಪ್ರಾಯೋಗಿಕ ಆಟವಾದ ಚದುರಂಗ ತಾಳ್ಮೆಯನ್ನು ಬಯಸುತ್ತದೆ. ಬದುಕಿಗೂ ತಾಳ್ಮೆ ಮುಖ್ಯ. ಹೀಗಾಗಿ ಈ ಆಟ ಶೈಕ್ಷಣಿಕ ಬದುಕಿಗೂ ಅತೀ ಅಗತ್ಯ ಎಂದು ಸಮಾಜಸೇವಕ ಬೆಂಗಳೂರಿನ ಭವಾನಿ ಆಟೋಮೇಟ್ಸ್‌ನ ಅಧ್ಯಕ್ಷ  ಆನಗಳ್ಳಿ ಕರುಣಾಕರ ಹೆಗ್ಡೆ ಹೇಳಿದರು. 

ಅವರು  ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಮಟ್ಟದ ಅಂತರ್-ಕಾಲೇಜು ಚೆಸ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. 
ಈ ಸಂದರ್ಭ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ     ಡಾ| ಕಿಶೋರ್ ಕುಮಾರ್ ಸಿ.ಕೆ., ಕಶ್ವಿ ಚೆಸ್ ಸ್ಕೂಲ್ ಕುಂದಾಪುರದ ನಿರ್ದೇಶಕ ಶ್ರೀ ನರೇಶ್ ಬಿ. ಮತ್ತು ಪುತ್ತೂರು ವಿವೇಕಾನಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರವಿಶಂಕರ್, ಹೆಚ್.ಎಮ್.ಎಮ್. ಮತ್ತು ವಿ.ಕೆ.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಶ್ರೀಮತಿ ಚಿಂತನಾ ರಾಜೇಶ್ ಇವರೆಲ್ಲ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಉಪ ಪ್ರಾಂಶುಪಾಲರಾದ   ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ  ರಕ್ಷಿತ್ ರಾವ್ ಗುಜ್ಜಾಡಿ ಉದ್ಘಾಟಕರನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕ  ಸತೀಶ್ ಶೆಟ್ಟಿ ವಂದಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಾಸುದೇವ್ ಭಟ್ ಕಾರ್ಯಕ್ರಮ ನಿರೂಪಿಸಿದರು.  

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!