Sunday, September 8, 2024

ನಾರಾಯಣಮೂರ್ತಿಗೆ ಬಡವರ ಕಷ್ಟ ಗೊತ್ತಿಲ್ಲ : ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ತಿರುಗೇಟು

ಜನಪ್ರತಿನಿಧಿ ವಾರ್ತೆ (ಮೈಸೂರು) : `ನಾರಾಯಣಮೂರ್ತಿಗೆ ಬಡವರ ಕಷ್ಟ ಗೊತ್ತಿಲ್ಲ. ಹಾಗಾಗಿ ಉಚಿತ ಕೊಡುಗೆಗಳನ್ನು ನೀಡದಂತೆ ಹೇಳಿದ್ದಾರೆ. ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧ” ಎಂದು  ಇದು ಸರ್ಕಾರದ ಉಚಿತ ಯೋಜನೆಗಳನ್ನು ಖಂಡಿಸಿರುವ ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾತಾಡಿದ ಅವರು , ಬಡವರಿಗೆ ನೀಡುವ ಉಚಿತ ಯೋಜನೆಗಳ ಬಗ್ಗೆ ಮಾತನಾಡುವ ನಾರಾಯಣಮೂರ್ತಿ ಅವರು, ಕಾರ್ಪೊರೇಟ್ ಸಂಸ್ಥೆಗಳ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಏಕೆ ಖಂಡಿಸಿಲ್ಲ ಎಂದು ಪ್ರಶ್ನಿಸಿದರು.

ನಾರಾಯಣಮೂರ್ತಿಗೆ ಬಡವರ ಕಷ್ಟ ಗೊತ್ತಿಲ್ಲಬಡವರ ಕಷ್ಟ ನಿವಾರಣೆಗಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ನಾರಾಯಣಮೂರ್ತಿಗೆ ಬಡವರ ಕಷ್ಟ ಗೊತ್ತಿಲ್ಲ. ಹಾಗಾಗಿ ಉಚಿತ ಕೊಡುಗೆಗಳನ್ನು ನೀಡದಂತೆ ಹೇಳಿದ್ದಾರೆ. ಉಚಿತ ಕೊಡುಗೆಗಳ ವಿಚಾರದಲ್ಲಿ ನಾರಾಯಣಮೂರ್ತಿಯವರು ನೀಡಿರುವ ಹೇಳಿಕೆ ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಆಗಿದೆ ಎಂದು ಕಿಡಿಕಾರಿದರು.

ಇನ್ನು ಭ್ರೂಣಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಭ್ರೂಣಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಿಐಡಿ ತನಿಖೆಗೆ ಆದೇಶಿಸಿದೆ. ಭ್ರೂಣ ಪತ್ತೆ ಮತ್ತು ಹತ್ಯೆ ಎರಡೂ ಕೂಡ ಕಾನೂನು ಬಾಹಿರ. ಈ‌ ಪ್ರಕಣರದಲ್ಲಿ ಭಾಗಿಯಾಗಿರುವವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಭವಿಷ್ಯದಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟು‌ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!