-0.3 C
New York
Thursday, February 29, 2024

Buy now

spot_img

ಬರ ಘೋಷಣೆಯಲ್ಲಿ ರಾಜಕೀಯ ಎನ್ನುವ ಶಾಸಕರ ಹೇಳಿಕೆ ಸತ್ಯಕ್ಕೆ ದೂರವಾದುದು-ವಿಕಾಸ್ ಹೆಗ್ಡೆ

ಕುಂದಾಪುರ: ಬರ ಘೋಷಣೆಯಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ ಎನ್ನುವ ಕುಂದಾಪುರ ಹಾಗೂ ಬೈಂದೂರು ಶಾಸಕರ ಹೇಳಿಕೆಯು ಸತ್ಯಕ್ಕೆ ದೂರವಾದುದು. ತಮ್ಮ ವೈಫಲ್ಯವನ್ನು ಮರೆಮಾಚಲು ಸರ್ಕಾರವನ್ನು ದೂರುವುದು ಇವರ ಸಣ್ಣತನವನ್ನು ತೋರಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಐದಕ್ಕೆ ಐದೂ ಶಾಸಕರು ಬಿಜೆಪಿ ಆದರೆ ಕಾರ್ಕಳ ತಾಲ್ಲೂಕು ಹೇಗೆ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಸೇರಿಕೊಂಡಿತು. ಆರೋಪ ಮಾಡುವ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದ ಬರದ ಪರಿಸ್ಥಿತಿಯನ್ನು ಸರ್ಕಾರದ ಮಟ್ಟದಲ್ಲಿ ಸಂಬಂಧಿತರ ಗಮನಕ್ಕೆ ತರಲು ವಿಫಲವಾದದ್ದೇ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕು ಬರ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಸೇರದೆ ಇರಲು ಕಾರಣ. ಕಾಂಗ್ರೆಸ್ ಪಕ್ಷ ಅಭಿವೃದ್ಧಿಯ ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡಲಿಲ್ಲ. ಇನ್ನಾದರೂ ಶಾಸಕರುಗಳು ರಾಜಕಾರಣವನ್ನು ಬದಿಗಿಟ್ಟು ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
0SubscribersSubscribe
- Advertisement -spot_img
- Advertisement -spot_img

Latest Articles

error: Content is protected !!