spot_img
Monday, April 27, 2026
spot_img

ಸಿದ್ದರಾಮಯ್ಯ ಸರ್ಕಾರದ ಮೇಲೆ ಉತ್ತರ ಕರ್ನಾಟಕದ ಜನತೆ ಸಾಕಷ್ಟು ನಿರೀಕ್ಷೆಯಲ್ಲಿದ್ದಾರೆ : ಬಿ. ವೈ ವಿಜಯೇಂದ್ರ

ಜನಪ್ರತಿನಿಧಿ ವಾರ್ತೆ : ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆ ಈ ಭಾಗದ ಜನರಿಗೆ ಇದೆ ಹಾಗೂ ವಿರೋಧ ಪಕ್ಷವಾದ ನಮ್ಮಲ್ಲೂ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಇಲ್ಲೇ ಪರಿಹಾರ ನೀಡಬೇಕು ಎಂಬ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣ ಮಾಡಲಾಗಿದೆ. ಈ‌‌ ಭಾಗದ ರೈತರಿಗೆ ಬಡವರಿಗೆ ಅನುಕೂಲ ಕಲ್ಪಿಸುವ ಹಿನ್ನಲೆಯಲ್ಲಿ ಸುವರ್ಣಸೌಧ ಕಟ್ಟಲಾಗಿದೆ. ಉತ್ತರ ಕರ್ನಾಟಕದ ಜನತೆ ಸಾಕಷ್ಟು ನಿರೀಕ್ಷೆಯಲ್ಲಿದ್ದಾರೆ ಎಂದಿದ್ದಾರೆ.

ಬರಗಾಲದಿಂದ ರೈತರು ಸಂಕಷ್ಟ ದಲ್ಲಿ ಇದ್ದಾರೆ. ರೈತರು ಈ ಅಧಿವೇಶನವನ್ನು ಸಾಕಷ್ಟು ಎದುರು ನೋಡುತ್ತಿದ್ದಾರೆ.‌ ಕಬ್ಬು ಬೆಳೆಗಾರರು ಸಾಕಷ್ಟು ಸಂಕಷ್ಟದಲ್ಲಿ ಇದ್ದಾರೆ ಪರಿಹಾರಕ್ಕಾಗಿ ಅವರು ಕೂಡಾ ಎದುರು‌‌‌ ನೋಡುತ್ತಿದ್ದಾರೆ ಎಂದಿದ್ದಾರೆ.

ರಾಜ್ಯ ಸರ್ಕಾರದ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ದಿನಕಳೆದಂತೆ ಅವುಗಳು ಹುಸಿಯಾಗುತ್ತಿವೆ.‌ ಬೆಳಗಾವಿ ಅಧಿವೇಶನದ ಮೂಲಕ ಉತ್ತರ ಕರ್ನಾಟಕ ಜನರಿಗೆ ಬಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಬೇಕು ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!