spot_img
Wednesday, January 22, 2025
spot_img

ವಿಜಯ ಮಕ್ಕಳ ಕೂಟ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕುಣಿತ ಭಜನೆ

ಕುಂದಾಪುರ: ವಂಡ್ಸೆ ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾದ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆಯವರು ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಭಜನೆಯ ತಾಳವನ್ನು ಹಸ್ತಾಂತರಿಸುವುದರೊಂದಿಗೆ ಕುಣಿತ ಭಜನೆಗೆ ಚಾಲನೆ ನೀಡಿ, ಭಜನೆಯಂತಹ ಚಟುವಟಿಕೆಯಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಸದೃಢತೆ ಬೆಳೆಯುವುದರೊಂದಿಗೆ ಸರ್ವಾಂಗೀಣ ಪ್ರಗತಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.

ನಿವೃತ್ತ ಮುಖ್ಯೋಪಾಧ್ಯಾಯರಾದ ಬಗ್ವಾಡಿ ರಾಜೀವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವಿ.ಎಂ.ಕೆ ಶಿಕ್ಷಣ ಸಂಸ್ಥೆಯ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಜಿ.ಪಂ.ಮಾಜಿ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ ಶುಭಶಂಸನೆಗೈದರು. ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಕುಂದಾಪುರ ಶಾಖಾಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಜನಾ ಪರಂಪರೆಯ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ಜಿಲ್ಲೆ ಭಜನಾ ಸಮಿತಿ ಪ್ರಧಾನ ಕಾರ್ಯದರ್ಶಿ ಭಜನಾ ತರಬೇತುದಾರರಾದ ಜಯಕರ್ ಪೂಜಾರಿ, ಹಿರಿಯ ಭಜನಾ ತರಬೇತುದಾರರಾದ ಬಚ್ಚು ಶೆಟ್ಟಿ, ವಸಂತ ಶೆಟ್ಟಿ ದೇವಲ್ಕುಂದ ಉಪಸ್ಥಿತರಿದ್ದರು. ನಿತೀನ್ ವಿಠಲವಾಡಿ ಪೂಜಾ ಕೈಂಕರ್ಯ ನೆರವೇರಿಸಿದರು.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಶ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ಮಂಜುನಾಥ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಜಯಲಕ್ಷ್ಮೀ ಕಾಮತ್ ವಂದಿಸಿದರು. ಬಳಿಕ ಸಂಸ್ಥೆಯ ವಿದ್ಯಾರ್ಥಿ/ನಿಯರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.

ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರ, ಸಂಸ್ಕೃತಿ ಹಾಗೂ ಪರಂಪರೆಯ ಮೌಲ್ಯಗಳನ್ನು ಕಲಿಸುವ ಸಲುವಾಗಿ ಇಲ್ಲಿ ಮಕ್ಕಳಿಗೆ ಭಜನಾ ತರಬೇತಿ ನೀಡಲಾಗುತ್ತಿದೆ. ಬಳಿಕ ಒಂದು ದಿನ ವಿದ್ಯಾರ್ಥಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರು, ವಿದ್ಯಾರ್ಥಿ ಪೋಷಕರ ಸಮ್ಮುಖದಲ್ಲಿ ಕುಣಿತ ಭಜನಾ ಕಾರ್ಯಕ್ರಮ ನಡೆಯುತ್ತದೆ. ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಓದುತ್ತಿದ್ದರೂ ಕೂಡಾ ಮಾತೃಭಾಷಾ ಹಿಡಿತದೊಂದಿಗೆ ದಾಸರ ಕೀರ್ತನೆಗಳು, ಭಜನೆಗಳನ್ನು ಅತ್ಯಂತ ಸ್ಪಷ್ಟವಾಗಿ ಹೇಳುವುದರ ಮೂಲಕ ತಾಳಕ್ಕೆ ತಕ್ಕಂತೆ ಕುಣಿಯುವುದು ವಿಶೇಷವಾಗಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!