Sunday, September 8, 2024

ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಅಸ್ತಂಗತ

ಜನಪ್ರತಿನಿಧಿ ವಾರ್ತೆ (ಮೈಸೂರು) :  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯ ಜಂಬೂ ಸವಾರಿಯ ನೇತಾರ ಆನೆ ಅರ್ಜುನ ಸಾವನ್ನಪ್ಪಿದೆ.

ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ಒಂಟಿ ಸಲಗದೊಂದಿಗೆ ನಡೆದ ಸಂಘರ್ಷದಲ್ಲಿ ತಿವಿತಕ್ಕೊಳಗಾಗಿ ಅರ್ಜುನ ಆನೆ ಮೃತಪಟ್ಟಿದೆ.

64 ವರ್ಷದ ಅರ್ಜುನ ಆನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿತ್ತು. ದಸರಾದಿಂದ ನಾಲ್ಕು ವರ್ಷದ ಹಿಂದೆ ನಿವೃತ್ತಿ ನೀಡಲಾಗಿತ್ತು. ಅಂಬಾರಿ ಹೊರದೆ ಇದ್ದರೂ ದಸರಾದಲ್ಲಿ ಭಾಗಿಯಾಗುತ್ತಿತ್ತು. ನಂತರ ಆನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿತ್ತು. ಈಗ ಆನೆ ಸೆರೆ ಕಾರ್ಯಾಚರಣೆ ವೇಳೆ ಹಾಸನ ಜಿಲ್ಲೆ ಎಸಳೂರು ಬಳಿ ಮೃತಪಟ್ಟಿದೆ.

ಹತ್ತು ದಿನದಿಂದ ಹಾಸನ ಜಿಲ್ಲೆಯಲ್ಲಿ ಆನೆಗಳ ಸೆರೆ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೂ ಐದು ಆನೆಗಳನ್ನು ಸೆರೆ ಹಿಡಿಯಲಾಗಿದೆ. ಎಲ್ಲಾ ಕಾರ್ಯಾಚರಣೆಯಲ್ಲಿ ಅರ್ಜುನ ಆನೆ ಇತ್ತು. ಸೋಮವಾರ ಬೆಳಗ್ಗೆ ಸಕಲೇಶಪುರ ತಾಲ್ಲೂಕು ಎಸಳೂರಿನಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಶುರುವಾಗಿದ್ದು, ಈ ವೇಳೆ ದುರಂತ ನಡೆದಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!