spot_img
Tuesday, August 11, 2026
spot_img

‌ಬೆಂಗಳೂರಿನ ಮೂವರು ಅಧಿಕಾರಿಗಳು ಸೇರಿ 63 ಕಡೆಗಳಲ್ಲಿ ಲೋಕಾಯುಕ್ತ ದಾಳಿ  

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಬೆಂಗಳೂರಿನ ಬೆಸ್ಕಾಂ ಜಯನಗರದ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಕೇಶವ, ಬೆಸ್ಕಾಂ ವಿಚಕ್ಷಣಾ ದಳದ ಕಾರ್ಯನಿರ್ವಹಕಾ ಎಂಜಿನಿಯರ್‌ ಸುಧಾಕರ್‌ ರೆಡ್ಡಿ, ಕಣಿಮಿಣಿಕೆ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್. ಕೃಷ್ಣಮೂರ್ತಿ ಅವರ ಮನೆ ಹಾಗೂ ಇತರೆ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಇಲ್ಲಿನ ಮೂರು ಅಧಿಕಾರಿಗಳನ್ನು ಒಳಗೊಂಡು ರಾಜ್ಯದ ಸುಮಾರು 63 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ಇಂದು(ಮಂಗಳವಾರ) ಬೆಳಗ್ಗೆ ದಾಳಿ ಮಾಡಿದ್ದಾರೆ.

ಸದ್ಯಕ್ಕಿರುವ ಮಾಹಿತಿಯನ್ವಯ ಬೆಸ್ಕಾಂ ಕಾರ್ಯ ನಿರ್ವಾಹಕ ಎಂಜಿನಿಯರ್‌ ಚನ್ನಕೇಶವ್‌ ಮನೆಯಲ್ಲಿ ಆರು ಲಕ್ಷ ನಗದು, ಮೂರು ಕೆ.ಜಿ ಚಿನ್ನ ಒಳಗೊಂಡು ಸುಮಾರು ಒಂದುವರೆ ಕೋಟಿ ಮೌಲ್ಯದ ವಸ್ತುಗಳನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಉಳಿದೆಡೆ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!