spot_img
Sunday, April 26, 2026
spot_img

ನೂತನ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈವಿ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ !

ಜನಪ್ರತಿನಿಧಿ ವಾರ್ತೆ (ಕಲಬುರಗಿ) : ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ. ಬೆಂಗಳೂರು  ಸೇರಿದಂತೆ ರಾಜ್ಯದ ಇತರೆ ಕಡೆಗಳಲ್ಲೂ ದಾಳಿ ನಡೆಸಲಾಗಿದೆ. ಸುಮಾರು 13 ಅಧಿಕಾರಿಗಳನ್ನು ಒಳಗೊಂಡು ಸೇರಿ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 

ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.  ಇನ್ನು ಮುಖ್ಯವಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿ ನಡೆಸಿದೆ.

ಯಾದಗಿರಿ ಜಿಲ್ಲೆಯ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್‌ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

ಈ ಹಿಂದೆ ಅವರು ಕಲಬುರಗಿಯ ಆರ್‌ಸಿಎಚ್ ಆಗಿದ್ದರು, ಈಗ ಯಾದಗಿರಿಯ ಡಿಎಚ್ಒ ಆಗಿರುವ ಡಾ.ಪ್ರಭುಲಿಂಗ ಮಾನಕರ ಅವರ ಕಲಬುರಗಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜತೆಗೆ ಯಾದಗಿರಿಯ ಮನೆ, ಕಚೇರಿ ಹಾಗೂ ಕಲಬುರಗಿ ಸಮೀಪದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಎಸ್ ಪಿ ಕರ್ನೂಲ್ ನೇತೃತ್ವದ ತಂಡ ದಾಳಿ ನಡೆಸಿದ್ದು, ದಾಖಲೆಗಳ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!