spot_img
Monday, April 27, 2026
spot_img

ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್ ಹ್ಯಾಕ್‌ ಮಾಡಿ ಅಶ್ಲೀಲ ದೃಶ್ಯಗಳ ಅಪ್‌ಲೋಡ್‌ ! ಕೇಂದ್ರ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ಸೈಬರ್ ಹ್ಯಾಕರ್ಸ್​ ರಾಜ್ಯ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲೂ ಅಶ್ಲೀಲ ದೃಶ್ಯಾವಳಿಗಳ ಅಪ್​ಲೋಡ್ ಮಾಡಿದ್ದಾರೆ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ನ್ಯಾಯ ಪೀಠಗಳಲ್ಲಿ ಲೈವ್‌ ಸ್ಟ್ರೀಮಿಂಗ್‌ ಮತ್ತು ವಿಡಿಯೊ ಕಾನ್ಫರೆನ್ಸ್‌ನನ್ನು ಹೈಕೋರ್ಟ್‌ ಇಂದು(ಮಂಗಳವಾರ) ನಿರ್ಬಂಧಿಸಿದೆ.

ಈ ಸಂಬಂಧ ಮುಕ್ತ ನ್ಯಾಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು “ನಾವು ಎಲ್ಲಾ ಲೈವ್‌ ಸ್ಟ್ರೀಮಿಂಗ್‌ಗಳನ್ನು ನಿರ್ಬಂಧಿಸುತ್ತಿದ್ದೇವೆಂದು ಹೇಳಿದ್ದಾರೆ.

ತಂತ್ರಜ್ಞಾನ ದುರ್ಬಳಕೆ, ಕೆಲವರಿಂದ ಅನುಚಿತ ವರ್ತನೆ ನಡೆದಿರುವುದು ದುರದೃಷ್ಟಕರ ಸಂಗತಿ. ಇದು ಅನಿರ್ಬಂಧಿತ ಪರಿಸ್ಥಿತಿಯಾಗಿದೆ. ಇದೆಲ್ಲದರ ನಡುವೆ ಕರ್ನಾಟಕ ಹೈಕೋರ್ಟ್‌ ಸಾರ್ವಜನಿಕರ ಹಿತದೃಷ್ಟಿಯಿಂದ ವಿಸ್ತೃತ ನೆಲೆಯಲ್ಲಿ ತಂತ್ರಜ್ಞಾನ ಬಳಕೆ ಮಾಡುವುದರ ಪರವಾಗಿ ಇರಲಿದೆ.

ಇದೊಂದು ಅನಿರ್ಬಂಧಿತ ಪರಿಸ್ಥಿತಿಯಾಗಿದ್ದು, ನಮಗೆ ಸಹಕರಿಸಬೇಕು. ಈ ಸಂಬಂಧ ಕಂಪ್ಯೂಟರ್‌ ತಂಡ ಅಥವಾ ರಿಜಿಸ್ಟ್ರಿಗೆ ದೂರು ಕೊಂಡೊಯ್ಯಬೇಡಿ.. ವ್ಯವಸ್ಥೆಯ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು, “ಸೈಬರ್‌ ಭದ್ರತಾ ಕಾರಣಗಳಿಗಾಗಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿನ ಎಲ್ಲಾ ಕಡೆ ವಿಡಿಯೊ ಕಾನ್ಫರೆನ್ಸ್‌ ಸೇವೆಯನ್ನು ಸದ್ಯಕ್ಕೆ ಅಮಾನತು ಮಾಡಲಾಗಿದೆ” ಎಂದು ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಕೆ ಎಸ್‌ ಭರತ್‌ ಕುಮಾರ್‌  ತಿಳಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಆ್ಯಪ್​ ಹ್ಯಾಕ್‌ ಆಗಿರುವ ವಿಚಾರ ತಿಳಿಯುತ್ತಿದ್ದಂತೆ ಹೈಕೋರ್ಟ್ ಸಿಬ್ಬಂದಿ ಕೇಂದ್ರ ವಿಭಾಗ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದ್ದು, ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!