spot_img
Saturday, June 13, 2026
spot_img

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ.5ರಂದು ನಡೆಯಿತು.

ನಿವೃತ್ತ ಪ್ರಾಂಶುಪಾಲರಾದ ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಕಡಿಮೆ ಶುಲ್ಕದಲ್ಲಿ ಮೌಲ್ಯಯುತ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಧ್ಯೇಯವಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಿರಿ ಎಂದರು.

ವೇದಿಕೆಯಲ್ಲಿ ಸಂಸ್ಥೆಯ ಕೋಶಾಧಿಕಾರಿ ಲಕ್ಷ್ಮೀ ನಾರಾಯಣ ಶೆಣೈ, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ , ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜಾ , ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಶ್ರೀಮತಿ ರಾಗಿಣಿ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಪ್ರಣೀತಾ ಸ್ವಾಗತಿಸಿದರು. ಸಿಂಚನಾ ವಂದಿಸಿ, ಕ್ಷಮಾ ಅತಿಥಿಯನ್ನು ಪರಿಚಯಿಸಿದರು.ಅದಿತಿ ಕಾರ್ಯಕ್ರಮ ನಿರೂಪಿದರು.
ಅಪರಾಹ್ನ 2 ಗಂಟೆ ಯಿಂದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!