spot_img
Saturday, June 13, 2026
spot_img

ಕುಂದಾಪುರ ಪೋರ್ಟ್ ಗೇಟ್ ಎಜ್ಯುಕೇಶನ್ ಟ್ರಸ್ಟ್‌: ಯುರೋಕಿಡ್ಸ್ ವಾರ್ಷಿಕೋತ್ಸವ

ಕುಂದಾಪುರದ ಪೋರ್ಟ್ ಗೇಟ್ ಎಜ್ಯುಕೇಶನ್ ಟ್ರಸ್ಟ್‌ನ ಘಟಕವಾದ ಯುರೋಕಿಡ್ಸ್ ನ 20ನೇ ಮತ್ತು ಓಕ್ ವುಡ್ ಇಂಡಿಯನ್ ಸ್ಕೂಲಿನ 6ನೆಯ ವರ್ಷದ ವಾರ್ಷಿಕೋತ್ಸವವು ಡಿ.೨ರಂದು ಶಾಲಾ ಆವರಣದಲ್ಲಿ ನೆಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂದ ಕರ್ನಾಟಕ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ವಹಿಸಿ ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗೆ ಒತ್ತು ಕೊಡುತ್ತಿರುವುದು ಶ್ಲಾಘನೀಯ. ಹಾಗೆಯೇ ರಾಜಕೀಯ ವಿಷಯದ ಬಗ್ಗೆ ಮಕ್ಕಳಿಗೆ ಪರಿಚಯ ಇರಲಿ ಎಂದರು. ವೇದಿಕೆಯಲ್ಲಿ ಪೋರ್ಟ್ ಗೇಟ್ ಎಜ್ಯುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಕಾರ್ಯದರ್ಶಿ ನೀತಾ ಶೆಟ್ಟಿ, ಇನ್ನೋರ್ವ ಮ್ಯಾನೇಜಿಂಗ್ ಟ್ರಸ್ಟಿ ಅಭಿನಂದನ್ ಶೆಟ್ಟಿ, ಟ್ರಸ್ಟಿ ಅರುಣ್ ಕುಮಾರ್ ಶೆಟ್ಟಿ ಮತ್ತು ಶಾಲಾ ಆಡಳಿತಾಧಿಕಾರಿ ಸಹನಾ ಶೆಟ್ಟಿ, ಪ್ರಾಂಶುಪಾಲರಾದ ಜ್ಯೋತಿ ಸುರೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮವು ದೇವಿಸ್ತುತಿ ನೃತ್ಯದ ಮೂಲಕ ಪ್ರಾರಂಭವಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ನಿರ್ವಹಿಸಿದರು.
ಪೋರ್ಟ್ ಗೇಟ್ ಎಜ್ಯುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಕಾರ್ಯದರ್ಶಿ ನೀತಾ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಭಿನಂದನ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಜ್ಯೋತಿ ಸುರೇಶ್ ವರದಿ ವಾಚಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!