spot_img
Sunday, April 26, 2026
spot_img

ನೇಜಾರು ಹತ್ಯೆ ಪ್ರಕರಣ : ಪ್ರಕರಣದ ಆರೋಪಿ ಪ್ರವೀಣ್ ಅರುಣ್‌  ಚೌಗಲೆಯ ನ್ಯಾಯಾಂಗ ಬಂಧನ ವಿಸ್ತರಣೆ

ಜನಪ್ರತಿನಿಧಿ ವಾರ್ತೆ(ಉಡುಪಿ) : ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಮಾರಕಾಸ್ತ್ರದಿಂದ ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಅರುಣ್‌  ಚೌಗಲೆಯ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚೌಗಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದರು. ನ್ಯಾಯಾಲಯ ಆತನ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಿದೆ.

ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರು ಐನಾಜ್, ಆಕೆಯ ಸಹೋದರಿ ಅಫ್ನಾನ್, ಸಹೋದರ ಅಸೀಮ್ ಮತ್ತು ಅವರ ತಾಯಿ ಹಸೀನಾ ಹತ್ಯೆಗೀಡಾಗಿದ್ದರು. ಐನಾಜ್ ಅಜ್ಜಿ ಹಾಜಿನಬ್ಬ ನೆಜ್ಜಾರಿನಲ್ಲಿರುವ ಅವರ ಮನೆಯಲ್ಲಿ ಗಾಯಗೊಂಡಿದ್ದರು. 

ಒಂದೇ ಕುಟುಂಬದ ನಾಲ್ವರನ್ನು ಕೇವಲ ಸುಮಾರು ಹದಿನೈದು ನಿಮಿಷಗಳ ಅಂತರದಲ್ಲಿ ಭೀಕರವಾಗಿ ಹತ್ಯೆಗೈದ ಆರೋಪಿ ಪ್ರವೀಣ್ ಚೌಗಲೆಯನ್ನು ನವೆಂಬರ್ 14 ರಂದು ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದರು. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!