spot_img
Sunday, April 26, 2026
spot_img

ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ್ದೇಕೆ ಎಂಬ ಪ್ರಶ್ನೆಗೆ ಬಿಜೆಪಿ ಗೂಳಿಹಟ್ಟಿ ಶೇಖರ್ ಅವರ ಮೂಲಕ ಉತ್ತರ ನೀಡಿದೆ : ಕಾಂಗ್ರೆಸ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಮಾಜಿ ಸಚಿವ, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೆ ಮಹಾರಾಷ್ಟ್ರದಲ್ಲಿನ ನಾಗ್ಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಹೆಡಗೇವಾರ್‌ ವಸ್ತುಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬಲ್ಲಿರಾ ಎಂದು ಪ್ರಶ್ನಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಬಿಜೆಪಿಯನ್ನು ಟೀಕೆ ಮಾಡಿದೆ.

ಇಂದು(ಬುಧವಾರ) ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ, ಈ ದಿನದಂದೇ RSS ಕಚೇರಿಗೆ ದಲಿತರಿಗೆ ಪ್ರವೇಶವಿಲ್ಲ ಎಂಬ ಸತ್ಯ ಬಿಜೆಪಿಯವರಿಂದಲೇ ಹೊರಬಿದ್ದಿದೆ.

ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸಿದ್ದೇಕೆ, ಹಿಂದೂವಾಗಿ ಸಾಯಲಾರೆ ಎಂದಿದ್ದೇಕೆ, ಮನುಸ್ಮೃತಿಯನ್ನು ಸುಟ್ಟಿದ್ದೇಕೆ ಎಂಬ ಪ್ರಶ್ನೆಗಳಿಗೆ ಬಿಜೆಪಿ ಪಕ್ಷವು ಗೂಳಿಹಟ್ಟಿ ಶೇಖರ್ ಅವರ ಮೂಲಕ ಉತ್ತರ ನೀಡಿದೆ! ಎಂದು ಕಾಂಗ್ರೆಸ್‌ ತಿವಿದಿದೆ.

ಇನ್ನು, ಸಂಘ ಪರಿವಾರದಲ್ಲಿ ಅಸ್ಪೃಶ್ಯತೆ ಆಚರಣೆ ಇದೆಯೇ ಇಲ್ಲವೇ ಇದರ ಬಗ್ಗೆ ಸ್ಪಷ್ಟನೆ ನೀಡುವಂತೆ ಹೊಸದುರ್ಗ ಮಾಜಿ ಶಾಸಕ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೆ ಪ್ರಶ್ನೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!