Sunday, September 8, 2024

ರಾಜ್ಯ ಚುನಾವಣೆಗಳಲ್ಲಿ ಗೆದ್ದ 12 ಬಿಜೆಪಿ ಸಂಸದರಲ್ಲಿ 10 ಮಂದಿ ಲೋಕಸಭೆಗೆ ರಾಜೀನಾಮೆ

ಜನಪ್ರತಿನಿಧಿ ವಾರ್ತೆ (ನವದೆಹಲಿ) : ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ 12 ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸತ್‌ ಸದಸ್ಯರಲ್ಲಿ (ಸಂಸದರು) ಹತ್ತು ಮಂದಿ ಇಂದು(ಬುಧವಾರ) ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನೇತೃತ್ವದಲ್ಲಿ ಸಂಸದರ ನಿಯೋಗ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದೆ.

ಸ್ಪೀಕರ್ ಅವರನ್ನು ಭೇಟಿ ಮಾಡಿದವರಲ್ಲಿ ಮಧ್ಯಪ್ರದೇಶದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ಸೇರಿದ್ದಾರೆ. ರಾಜಸ್ಥಾನದಿಂದ, ರಾಜೀನಾಮೆ ಸಲ್ಲಿಸಿದ ಸಂಸದರಲ್ಲಿ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ, ಹಾಗೂ ಛತ್ತೀಸ್‌ಗಢದ ಅರುಣ್ ಸಾವೊ ಮತ್ತು ಗೋಮತಿ ಸಾಯಿ ತಮ್ಮ ಸಂಸದರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನರಸಿಂಗ್‌ಪುರ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ಪ್ರಹ್ಲಾದ್ ಪಟೇಲ್ ಮಾಧ್ಯಮ ವರದಿಗಾರರಿಗೆ ಸ್ಪಂದಿಸಿ, “ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದ ನಂತರ ನಾನು ಲೋಕಸಭೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶೀಘ್ರದಲ್ಲೇ ನಾನು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.

ಬಾಬಾ ಬಾಲಕನಾಥ್ ಮತ್ತು ರೇಣುಕಾ ಸಿಂಗ್ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ ಎಂಬ ಮಾಹಿತಿ ಇದೆ.

ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನನ್ನು ಮಣಿಸಿ ಸರ್ಕಾರ ರಚಿಸಲು ಸಿದ್ಧವಾಗಿದೆ. ತೆಲಂಗಾಣದಲ್ಲಿ ಬಿಆರ್‌ಎಸ್‌ ಪಕ್ಷವನ್ನು ಹಿಂದಿಕ್ಕಿ ಕಾಂಗ್ರೆಸ್‌ ಅಧಿಕಾರ ಹಿಡಿಯಿತು. ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ತಮ್ಮ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ನಡೆದ ಈ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಸೆಮಿಫೈನಲ್ ಚುನಾವಣಾ ಸಮರ ಎಂದು ಬಿಂಬಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!