spot_img
Sunday, April 26, 2026
spot_img

ಐಸಿಸ್‌ ಬೆಂಗಲಿಗನ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ : ಯತ್ನಾಳ್‌ ಆರೋಪ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್‌ ಬೆಂಗಲಿಗ ಹಾಗೂ ಉಗ್ರರ ಬಗ್ಗೆ ಸಹಾನುಭೂತಿಯುಳ್ಳ ತನ್ವೀರ್‌ ಫೀರ್‌ ಎಂಬಾತನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪ ಮಾಡಿದ್ದಾರೆ.

ತಮ್ಮ ವೈಯಕಕ್ತಿ ಅಧಿಕೃತ ʼಎಕ್ಸ್‌ʼ ಖಾತೆಯ ಮೂಲಕ ಸಿಎಂ ವಿರುದ್ಧ ಆರೋಪಿಸಿದ ಅವರು, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳನ್ನು ಕೂಡ ಯತ್ನಾಳ್‌ ಹಂಚಿಕೊಂಡಿದ್ದಾರೆ.

ಮಾತ್ರವಲ್ಲದೇ, ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ ಎಂದಿದ್ದಾರೆ.

ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ. ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು  ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!