Sunday, September 8, 2024

ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ  ಕಮಲನಾಥ್‌ ರಾಜೀನಾಮೆ ? : ಸುದ್ದಿ ಸಂಸ್ಥೆ ANI ವರದಿ

ಜನಪ್ರತಿನಿಧಿ ವಾರ್ತೆ(ನವದೆಹಲಿ) :  ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಮಲ್ ನಾಥ್ ಅವರು ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆಯಿದೆ ಎಂಬ ಮಾಹಿತಿ ಈಗ ಹೊರಬಿದ್ದಿದೆ.

ಸುದ್ದಿ ಸಂಸ್ಥೆ ANI ನೀಡಿರುವ ಮಾಹಿತಿಯ ಪ್ರಕಾರ, ಕಮಲ್ ನಾಥ್ ಅವರು ನಿನ್ನೆ(ಮಂಗಳವಾರ) ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ  ಹೊಸ ರಾಜ್ಯಾಧ್ಯಕ್ಷರನ್ನು ನೇಮಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದಲ್ಲದೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸೇರಿದಂತೆ ʼಇಂಡಿಯಾʼ ಬಣದ ಅನೇಕ ನಾಯಕರ ವಿರುದ್ಧ ಸೀಟು ಹಂಚಿಕೆಯ ಕುರಿತು ನಾಥ್ ಅವರ ಟೀಕೆಗಳ ಬಗ್ಗೆ ಕಾಂಗ್ರೆಸ್ ನಾಯಕತ್ವವು ಅಸಮಾಧಾನಗೊಂಡಿದೆ.

ಇನ್ನು, ಮಧ್ಯಪ್ರದೇಶದ 230 ಅಸೆಂಬ್ಲಿ ಕ್ಷೇತ್ರಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) 163 ಸ್ಥಾನಗಳನ್ನು ಗಳಿಸಿದರೆ, ಕಾಂಗ್ರೆಸ್ 66 ಕ್ಷೇತ್ರಗಳಿಗೆ ತೃಪ್ತಿ ಪಟ್ಟುಕೊಂಡಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!