spot_img
Wednesday, January 22, 2025
spot_img

ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧಾರ

ಜನಪ್ರತಿನಿಧಿ ವಾರ್ತೆ (ಚಿಕ್ಕಬಳ್ಳಾಪುರ) : ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ  ಡಿಸೆಂಬರ್ 11 ರಿಂದ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. 

ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ MEMU ರೈಲುಗಳ ಕಾರ್ಯಾಚರಣೆಯನ್ನು ವಿಸ್ತರಿಸಲು ನೈಋತ್ಯ ರೈಲ್ವೆ ತೀರ್ಮಾನ ಮಾಡಿದೆ.

ಯಲಹಂಕ-ಚಿಕ್ಕಬಳ್ಳಾಪುರ ಮಾರ್ಗದ ವಿದ್ಯುದ್ದೀಕರಣವು ಮಾರ್ಚ್ 2022 ರಲ್ಲಿ ಪೂರ್ಣಗೊಂಡಿದೆ. ಆದರೆ, ವಿವಿಧ ಕಾರಣಗಳಿಂದ ವಿದ್ಯುತ್ ರೈಲುಗಳ ಅಳವಡಿಕೆ ವಿಳಂಬವಾಗಿದೆ. ಪ್ರಸ್ತುತ, ನಂದಿ ನಿಲ್ದಾಣದಲ್ಲಿ  ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಕೋಲಾರ-KSR ಬೆಂಗಳೂರು ನಡುವೆ ಡೇಮೊ ರೈಲು ಸಂಚರಿಸುತ್ತಿವೆ.

ಚಿಕ್ಕಬಳ್ಳಾಪುರಕ್ಕೆ ಸೇವೆಗಳನ್ನು ವಿಸ್ತರಿಸುವುದರಿಂದ ವಿದ್ಯಾರ್ಥಿಗಳು, ರೈತರು ಮತ್ತು 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲು ಬಯಸುವ ಪ್ರವಾಸಿಗರಿಗೆ ಅನುಕೂಲವಾಗುತ್ತದೆ ಎಂಬುದನ್ನು ನೈರುತ್ಯ ರೈಲ್ವೆ ಗಮನಿಸಿದೆ. ಆದರೆ ಈ ರೈಲುಗಳು ಬೆಟ್ಟಹಲಸೂರು, ದೊಡ್ಡಜಾಲ, ಚನ್ನಸಂದ್ರದಂತಹ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುವುದಿಲ್ಲ.

ನಂದಿ ನಿಲುಗಡೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಒಮ್ಮೆ ಮುಗಿದ ನಂತರ, ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಪ್ರವಾಸಿಗರಿಗೆ ಬೆಳಗ್ಗೆಯಿಂದಲೇ ರೈಲ್ವೆ ಸೇವೆ ಆರಂಭವಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ರೈಲಿನ ವಿವರ ಇಂತಿದೆ:  ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್ ರೈಲಿನ ಸಂಖ್ಯೆ  6531/06532, ಬೆಂಗಳೂರು, ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ ರೈಲಿನ ಸಂಖ್ಯೆ 06535/06583 ಮತ್ತು ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲಿನ ಸಂಖ್ಯೆ 06593/06594.   

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!