Sunday, September 8, 2024

ಬಿ. ಬಿ. ಹೆಗ್ಡೆ ಕಾಲೇಜು; ಮಂಗಳೂರು ವಿ.ವಿ. ಮಟ್ಟದ ಅಂತರ್-ಕಾಲೇಜು ಚೆಸ್ ಪಂದ್ಯಾಟ ಸಂಪನ್ನ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ವಿ.ವಿ. ವ್ಯಾಪ್ತಿಯ ಅಂತರ್-ಕಾಲೇಜು ಪುರುಷರ ಮತ್ತು ಮಹಿಳೆಯರ ಚೆಸ್ ಪಂದ್ಯಾಟದ ಸಮಾರೋಪ ಸಮಾರಂಭ ಶನಿವಾರ ನಡೆಯಿತು.

ವಿದ್ಯಾರ್ಥಿ ದೆಸೆಯಲ್ಲಿಯೇ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಬದುಕು ಚದುರಂಗ ಸ್ಪರ್ಧೆಯಿದ್ದ ಹಾಗೆ. ವಿದ್ಯಾರ್ಥಿಗಳು ನ್ಯಾಯ, ಸತ್ಯ, ಧರ್ಮ ಮತ್ತು ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡರೆ ಭವಿಷ್ಯದ ಬದುಕಿನಲ್ಲಿ ಯಶಸ್ಸು ಸಾಧ್ಯ ಎಂದು ಪಂಜುರ್ಲಿ ಸಮೂಹ ಹೋಟೆಲ್ಸ್‌ಗಳ ಸ್ಥಾಪಕ, ಆಡಳಿತ ನಿರ್ದೇಶಕ ಪಂಜುರ್ಲಿ ರಾಜೇಂದ್ರ ವಿ. ಶೆಟ್ಟಿ ಸಮಾರೋಪ ಮಾತುಗಳನ್ನಾಡಿದರು.

ವಿ.ವಿ. ವ್ಯಾಪ್ತಿಯ ಅಂತರ್-ಕಾಲೇಜು ಪುರುಷರ ಚೆಸ್ ವಿಭಾಗದಲ್ಲಿ ಎಸ್.ಡಿ.ಎಮ್. ಕಾಲೇಜು, ಉಜಿರೆ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಜೊತೆಗೆ ಗುಲಾಬಿ ಶಿವರಾಮ ನೊಂಡಾ ರೋಲಿಂಗ್ ಟ್ರೋಫಿ ಪಡೆದುಕೊಂಡರು. ಸೈಂಟ್ ಅಲೋಶಿಯಸ್ ಕಾಲೇಜು, ಮಂಗಳೂರು ದ್ವಿತೀಯ, ಪೂರ್ಣಪ್ರಜ್ಞಾ ಕಾಲೇಜು, ಉಡುಪಿ ತೃತೀಯ, ಮಹಿಳೆಯರ ವಿಭಾಗದಲ್ಲಿ ಸೈಂಟ್ ಅಲೋಶಿಯಸ್ ಕಾಲೇಜು, ಮಂಗಳೂರು ಪ್ರಥಮ, ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು, ಉಡುಪಿ ದ್ವಿತೀಯ, ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ತೃತೀಯ ಸ್ಥಾನ ಪಡೆದುಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿಸೋಜಾ ಅತಿಥಿ ನೆಲೆಯ ಮಾತುಗಳನ್ನಾಡಿದರು.

ತೀರ್ಪುಗಾರರಾದ ಮಂಗಳೂರಿನ ಡೆರಿಕ್ ಚೆಸ್ ಸ್ಕೂಲ್ ಆಡಳಿತಾಧಿಕಾರಿ ಶ್ರೀ ಡೆರಿಕ್ ಪಿಂಟೋ ಹಾಗೂ ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕುಮಾರ್ ಅನಿಸಿಕೆ ಹಂಚಿಕೊಂಡರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ರಂಜಿತ್ ಟಿ.ಎನ್. ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲೀಷ್ ಪ್ರಾಧ್ಯಾಪಕಿ ಮೋನಿಕಾ ಡಿಸೋಜಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ವಾಣಿಜ್ಯ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್ ವಂದಿಸಿ, ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!