spot_img
Sunday, April 26, 2026
spot_img

ಬಂಟರ ಯಕ್ಷ ಸಂಭ್ರಮ ಕಾರ್ಯಕ್ರಮದ ಸಂಚಾಲಕರಾಗಿ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ ಪ್ರಯುಕ್ತ ಡಿಸೆಂಬರ್30ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ಬಂಟರ ಯಕ್ಷ ಸಂಭ್ರಮ ಕಾರ್ಯಕ್ರಮದ ಸಂಚಾಲಕರಾಗಿ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆಯಾಗಿದ್ದಾರೆ.

ತಮ್ಮ ವಿದ್ಯಾರ್ಥಿ ಜೀವನದ ಬದುಕಿನಲ್ಲಿ ಅಪಾರವಾದ ಯಕ್ಷಗಾನ ಆಸಕ್ತಿ ಹೊಂದಿದ ಇವರು ಶಾಲಾ ಕಾಲೇಜುಗಳಲ್ಲಿ, ಅನೇಕ ಸಂಘ ಸಂಸ್ಥೆಗಳಲ್ಲಿ, ಯಕ್ಷಗಾನ ವೇಷ ಹಾಗೂ ಹವ್ಯಾಸಿ ಭಾಗವತರಾಗಿ ಕಾರ್ಯನಿರ್ವಹಿಸಿರುವುದ ಲ್ಲದೆ ಕಾಲೇಜಿನ ಯಕ್ಷಗಾನ ಸಂಘದ ಜೊತೆ ಸಂಯೋಜನಾಧಿಕಾರಿಯಾಗಿ, ಕನ್ನಡ ಸಾಹಿತ್ಯ ಸಂಘದ ಸಂಯೋಜನಾಧಿಕಾರಿಯಾಗಿ, ಕುಂದಗನ್ನಡ ಸಂಘದ ಸಂಯೋಜನಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿರುವುದಲ್ಲದೆ, ಯುವ ಬಂಟರ ಸಂಘದ ಜೊತೆ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಡಿಸೆಂಬರ್ 30 ರ ಕಾರ್ಯಕ್ರಮದಲ್ಲಿ ಬಂಟ ಸಮಾಜದ 63 ಮಂದಿ ಕಲಾವಿದರಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ 10 ಮಂದಿ ಹಿರಿಯ ಕಲಾವಿದರಿಗೆ ಬಂಟ ಯಕ್ಷ ಭೂಷಣ ಪ್ರಶಸ್ತಿ ಹಾಗೂ ಆಯ್ದ ಬಂಟ ಕಲಾವಿದರಿಂದ ಮಾಯಾಪುರಿ, ವೀರಮಣಿ, ಅಭಿಮನ್ಯು ಕಾಳಗ ಯಕ್ಷಗಾನ ಪ್ರಸಂಗ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಬಿ ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!