spot_img
Wednesday, January 22, 2025
spot_img

ಕನ್ನಡದ ಹಿರಿಯ ನಟಿ ಲೀಲಾವತಿ ವಿಧಿವಶ | ಇಹಲೋಕ ತ್ಯಜಿಸಿದ ಕನ್ನಡದ ನೆಚ್ಚಿನ ತಾರೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) :  ಹಿರಿಯ ನಟಿ ಲೀಲಾವತಿ ಅವರು ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಲೀಲಾವತಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಡಿ.8) ಸಂಜೆ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ.

ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000 ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದರು.

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.

ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾ ಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ಗೆಜ್ಜೆ ಪೂಜೆ, ಸಿಪಾಯಿ ರಾಮು, ನಾಗರಹಾವು, ಭಕ್ತ ಕುಂಬಾರ ಮುಂತಾದ ಚಿತ್ರಗಳು ಪ್ರಮುಖವಾದವು.

ಪ್ರಶಸ್ತಿ ಗೌರವಗಳು :

2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

2006 – ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ

1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು:

ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ

1960-70– ಗೆಜ್ಜೆಪೂಜೆ

1971-72 – ಸಿಪಾಯಿ ರಾಮು

1989-90- ಡಾಕ್ಟರ್ ಕೃಷ್ಣ

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!