Saturday, September 21, 2024

ಇಬ್ಬರು ಡ್ರಗ್ಸ್‌ ಪೆಡ್ಲರ್‌ಗಳ ಬಂಧನ | ಆರು ಲಕ್ಷ ಮೌಲ್ಯದ ಡ್ರಗ್ಸ್‌ ವಶಕ್ಕೆ

ಜನಪ್ರತಿನಿಧಿ ವಾರ್ತೆ(ಮಂಗಳೂರು) :  ಸಾರ್ವಜನಿಕರಿಗೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ನಿಷೇಧಿತ ಮಾಧಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಾತ್ರವಲ್ಲದೇ, ಅವರಲ್ಲಿದ್ದ ಆರು ಲಕ್ಷ ಮೌಲ್ಯದ ಡ್ರಗ್ಸ್‌ನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಗರದ ಕದ್ರಿ ಪಾರ್ಕ್‌ನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ನವಾಝ್‌(40 ವ) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜರುದ್ದೀನ್‌ ಅಲಿಯಾಸ್‌ ಅಜರ್‌(39 ವ) ಎಂದು ಗುರುತಿಸಲಾಗಿದೆ. 

ಆರೋಪಿಗಳಿಂದ ಆರು ಲಕ್ಷ ಮೌಲ್ಯದ ಎಂಡಿಎಂಎ ಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಮೂರು ಮೊಬೈಲ್‌ ಫೋನ್‌ಗಳು, ಡಿಜಿಟಲ್‌ ತೂಕದ ಮಾಪಕ ಸೇರಿ ಮಾದಕ ದ್ರವ್ಯ ಮಾರಾಟಕ್ಕೆ ಬಳಸಲಾದ ಸ್ಕೂಟರ್‌ನನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಅಂದಾಜು ಒಟ್ಟು ಮೌಲ್ಯ 6,83,120 ರೂ. ಎಂದು ಹೇಳಲಾಗಿದೆ.

ಸೈಬರ್‌, ಎಕನಾಮಿಕ್‌ ಹಾಗೂ ನಾರ್ಕೋಟಿಕ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ರಗ್ಸ್‌ ದಂಧೆಯಲ್ಲಿ ಭಾಗಿಯಾಗಿರುವ ಇತರರ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!