spot_img
Sunday, April 26, 2026
spot_img

ಸಿರಿಬಾಗಿಲು ಸಾಂಸ್ಕೃತಿಕ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಬೃಹತ್ ಯೋಜನೆಯಾದ ಸಾಂಸ್ಕೃತಿಕ ಭವನವು ಡಿಸೆಂಬರ್ 26 ರಂದು ಮಂಗಳವಾರ ರಾಜರ್ಷಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಯ ಗೊಳಿಸಲಿದ್ದಾರೆ.

ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಶ್ರೀಮದ್ ಎಡನೀರು ಮಠದಲ್ಲಿ ಬಿಡುಗಡೆಗೊಳಿಸಿದರು. ಗಡಿನಾಡು ಕಾಸರಗೋಡಿಗೆ ಸಾಂಸ್ಕೃತಿಕ ಭವನವು ಮುಂದಿನ ದಿನಗಳಲ್ಲಿ ದೊಡ್ಡ ಕೊಡುಗೆಯಾಗಲಿದೆ. ಸಂಪೂರ್ಣ ಯಶಸ್ವಿ ಯಾಗಿ ನಡೆಯಲಿ ಎಂದು ಹಾರೈಸಿದರು.

ಲೋಕಾರ್ಪಣಾ ಕಾರ್ಯಕ್ರಮದ ಸ್ವಾಗತ ಸಮಿತಿಯ ಸಂಚಾಲಕರಾದ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ, ರಂಗ ನಿರ್ದೇಶಕ ಮೂರ್ತಿ ದೇರಾಜೆ, ಕನ್ನಡ ಗ್ರಾಮದ ಶಿವರಾಮ ಕಾಸರಗೋಡು, ಕವಿ ರಾಧಾಕೃಷ್ಣ ಉಳಿಯತ್ತಡ್ಕ, ಶ್ಯಾಮ್ ಕುಂಚಿನಡ್ಕ, ರಾಜಾರಾಮ ರಾವ್ ಮಿಯಪದವು, ಶ್ರೀಮುಖ ಯಸ್. ಅರ್ ಮಯ್ಯ, ಶ್ರೀರಾಜ ಮಯ್ಯ ಉಪಸ್ಥಿತರಿದ್ದರು.
ಡಿ.26ರಂದು ಸಂಜೆ 7 ರಿಂದ ಶ್ರೀ ಧರ್ಮಸ್ಥಳ ಮೇಳದವರಿಂದ ‘ನಂದಿ ನಂದಿನಿ‘ ಯಕ್ಷಗಾನ ಬಯಲಾಟ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!