spot_img
Sunday, April 26, 2026
spot_img

ಬರಗಾಲ ಪರಿಹಾರಕ್ಕೆ ಮೋಡ ಬಿತ್ತನೆ ಮಾಡುವುದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ : ಡಿಕೆಶಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಜ್ಯದಲ್ಲಿ ಭೀಕರ ಬರಗಾಲವು ಭೂಮಿಯನ್ನು ಬಂಜರುಗೊಳಿಸುತ್ತಿದ್ದು,  ಜಮೀನಿನಲ್ಲಿ ಬೆಳೆ ಬೆಳೆಯಲು ಸಾಧ್ಯವಾಗದ ಕಾರಣ ಅನೇಕ ರೈತರು ಮತ್ತು ದಿನಗೂಲಿ ಕಾರ್ಮಿಕರು ಜೀವನೋಪಾಯಕ್ಕಾಗಿ ಪರಿತಪಿಸುವಂತಾಗಿದೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಬರಗಾಲ ಪರಿಹಾರಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪವು ಪ್ರತಿಪಕ್ಷಗಳಿಂದ ಕೇಳಿ ಬಂತು.

ಆದರೇ, ಈಗ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಮುಂದಾಗಿದ್ದು, ಮೋಡ ಬಿತ್ತನೆ ಮಾಡುವುದಕ್ಕೆ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಅವರು,  ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆ ಮಾಡುವ ವಿಚಾರವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮೋಡ ಬಿತ್ತನೆ ವಿಚಾರವಾಗಿ ಅನೇಕ ರಾಜ್ಯಗಳಲ್ಲಿ ಪ್ರಯೋಗ ಮಾಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಹೆಚ್.ಕೆ ಪಾಟೀಲ್ ಅವರು ಸಚಿವರಾಗಿದ್ದಾಗಲೂ ಈ ಪ್ರಯೋಗ ಮಾಡಲಾಗಿತ್ತು. ಈ ವಿಚಾರದಲ್ಲಿ ಟೆಂಡರ್ ಹಾಗೂ ಇತರೆ ಪ್ರಕ್ರಿಯೆಯ ತಾಂತ್ರಿಕ ವಿಚಾರಗಳನ್ನು ಪರಿಗಣಿಸಬೇಕಾಗುತ್ತದೆ. ಈ ಬಗ್ಗೆ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!