spot_img
Sunday, April 26, 2026
spot_img

ನೇಜಾರು ಹತ್ಯೆ ಪ್ರಕರಣ : ಆರೋಪಿ ಮೇಲೆ ಹಲ್ಲೆಗೆ  ಯತ್ನಿಸಿದ 11 ಮಂದಿಗೆ ನೋಟಿಸ್ ಜಾರಿಗೊಳಿಸಿದ ಪೊಲೀಸರು

ಜನಪ್ರತಿನಿಧಿ ವಾರ್ತೆ (ಉಡುಪಿ) : ಮೂವರು ಮಹಿಳೆಯರನ್ನು ಒಳಗೊಂಡು ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಆರೋಪಿ 37 ವರ್ಷದ ಪ್ರವೀಣ್ ಅರುಣ್ ಚೌಗಲೆ, ಹಸೀನಾ (46), ಅಫ್ನಾನ್ (23), ಐನಾಜ್ (21) ಮತ್ತು ಅಸೀಮ್ (12) ಎಂಬುವವರನ್ನು ಉಡುಪಿಯ ನೆಜಾರಿನಲ್ಲಿ ಅವರ ಮನೆಯಲ್ಲಿ ಹತ್ಯೆ ಮಾಡಿದ್ದನು.

ಪೊಲೀಸರು ಆರೋಪಿಯನ್ನು ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ನಂತರ ನವೆಂಬರ್ 16 ರಂದು ಹತ್ಯೆ ನಡೆದ ನಿವಾಸಕ್ಕೆ ಕರೆತಂದಿದ್ದರು. ಈ ವೇಳೆ ಉದ್ರೀಕ್ತಗೊಂಡಿದ್ದ ಸ್ಥಳೀಯರು ಆತನ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸರು ಕೆಲಹೊತ್ತು ಹರಸಃಸ ಪಡೆಬೇಕಾಗಿತ್ತು. ಲಘು ಲಾಠಿ ಚಾರ್ಚ್‌ ಕೂಡ ಮಾಡಿದ ಪ್ರಸಂಗವೂ ನಡೆಯಿತು.

ಪೊಲೀಸರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆರೋಪಿ ಮೇಲೆ ಹಲ್ಲೆಗೆ ಯತ್ನಿಸಿದ 11 ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!