spot_img
Sunday, April 26, 2026
spot_img

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ವಾರ್ಷಿಕೋತ್ಸವವು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಮತ್ತು ಹಳೇ ವಿದ್ಯಾರ್ಥಿ ಸೀತಾರಾಮ ನಕತ್ತಾಯ ಧ್ವಜಾರೋಹಣ ಮಾಡುವುದರೊಂದಿಗೆ ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಇದರ ಪ್ರಾಂಶುಪಾಲರಾದ ಡಾ. ಎಸ್ ಭಾಸ್ಕರ ಶೆಟ್ಟಿ ಕಾಳಾವರ ಮಾತನಾಡಿ ಈ ಸ್ಪರ್ಧಾತ್ಮಕ ಯುಗದಲ್ಲಿ ಸರಕಾರಿ ಸಂಸ್ಥೆಯಾದ ಕುಂದಾಪುರ ಕಾಲೇಜು ಸುಮಾರು ೨೦೦೦ ವಿದ್ಯಾರ್ಥಿಗಳನ್ನು ಹೊಂದಿ ಗುಣಾತ್ಮಕ ಶಿಕ್ಷಣ ಕೊಡುತ್ತಿರುವುದು ಶ್ಲಾಘನೀಯ ಎಂದರು.
ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿಶೋರ ಕುಮಾರ ಬಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ ಕುಮಾರ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸುಮಾರು ೧೮ ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಪ್ರಕಾಶ್ಚಂದ್ರ ಶೆಟ್ಟಿ ಮತ್ತು ಪ್ರೌಢಶಾಲಾ ವಿಭಾಗದ ಪ್ರಥಮ ದರ್ಜೆ ಗುಮಾಸ್ತರಾಗಿ ೧೨ ವರ್ಷಗಳ ಕಾಲೆ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀಮತಿ ಸರಸ್ವತಿ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಮತ್ತು ವಲಯ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜು ವಿದ್ಯಾರ್ಥಿಗಳ ಬಹುಮಾನ ಪಟ್ಟಿಯನ್ನು ಶ್ರೀಮತಿ ಜ್ಯೋತ್ಸ್ನಾ ಪೈ, ಶ್ರೀಮತಿ ಪೂರ್ಣಿಮಾ ಪಿ ನಾಯಕ್, ಶ್ರೀಮತಿ ಗೀತಾ ಕುಂದರ್, ಶ್ರೀಮತಿ ಸುಮಿತ್ರಾ, ಶಂಕರ ನಾಯ್ಕ, ಶ್ರೀಮತಿ ನೇತ್ರಾವತಿ ವಾಚಿಸಿದರು. ಪ್ರೌಢಶಾಲಾ ವಿಭಾಗದ ವಿಜೇತರ ಪಟ್ಟಿಯನ್ನು ಪ್ರದೀಪ ಶೆಟ್ಟಿ, ಶ್ರೀಮತಿ ಸವಿತಾ, ಶ್ರೀಮತಿ ವಿಜಯ ಪಿ, ಶ್ರೀಮತಿ ನಾಗರತ್ನ, ಶ್ರೀಮತಿ ಶಾರದ ಮಯ್ಯರ್ ವಾಚಿಸಿದರು. ಹಳೇ ವಿದ್ಯಾರ್ಥಿಗಳಾದ ನಾರಾಯಣ, ರಾಮಣ್ಣ, ರಾಜೇಶ ಕಾವೇರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಉಪಪ್ರಾಂಶುಪಾಲರಾದ ಕಿರಣ ಹೆಗ್ಡೆ ಸ್ವಾಗತಿಸಿದರೆ, ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ ವರದಿ ವಾಚಿಸಿದರು. ಹಿರಿಯ ಉಪನ್ಯಾಸಕರಾದ ಭುಜಂಗ ಶೆಟ್ಟಿ ವಂದಿಸಿದರು. ಉಪನ್ಯಾಸಕ ಉದಯ ಕುಮಾರ ಶೆಟ್ಟಿ ಕಾಳಾವರ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!