spot_img
Sunday, April 26, 2026
spot_img

ರಾಜ ಭವನದಲ್ಲಿ ಬಾಂಬ್ ಬೆದರಿಕೆ ಕರೆ : ಶಂಕಿತ ವ್ಯಕ್ತಿ ವಶಕ್ಕೆ : ತನಿಖೆಗೆ ವೇಗ

ಜನಪ್ರತಿನಿಧಿ ವಾರ್ತೆ( ರಾಜಧಾನಿ ಬೆಂಗಳೂರು) : ರಾಜಧಾನಿ ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ನಿಗೂಢ ಜಾಲತಾಣದಿಂದ ಬಂದ ಈಮೇಲ್‌ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್‌ ಬೆದರಿಕೆ ಕರೆ ಬಂದಿದೆ.

ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ನಿನ್ನೆ(ಸೋಮವಾರ) ರಾತ್ರಿ ಕರೆ ಮಾಡಿ ತಿಳಿಸಲಾಗಿದೆ. ರಾತ್ರಿ 11.30ರ ಹೊತ್ತಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹೇಳಿದ್ದಾನೆಂದು ತಿಳಿದು ಬಂದಿದೆ.

ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ಕೊಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್‌ ಸ್ಕ್ವಾಡ್‌ ಮತ್ತು ಡಾಗ್‌ ಸ್ಕ್ವಾಡ್‌ನೊಂದಿಗೆ ಅಲ್ಲಿಗೆ ಧಾವಿಸಿ ಪರಿಶೀಲನೆ ಮಾಡಿದ್ದಾರೆ.

ರಾಜಭವನಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ. ಆದರೆ, ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ರಾಜಭವನ ಸ್ಥಳ ವಿಶಾಲವಾದ ಜಾಗವಾಗಿದ್ದು, ಯಾವ ಭಾಗದಲ್ಲಿ ಇಡಲಾಗಿದೆ ಎಂಬ ಮಾಹಿತಿಯನ್ನು ವ್ಯಕ್ತಿ ನೀಡಿಲ್ಲ. ಈ ನಡುವೆ, ರಾಜಭವನಕ್ಕೆ ಯಾವ ನಂಬರ್‌ನಿಂದ ಕರೆ ಮಾಡಲಾಗಿದೆ. ಕರೆ ಮಾಡಿದ ವ್ಯಕ್ತಿ ಯಾರು ಎಂಬ ವಿಚಾರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಂಕಿತ ವ್ಯಕ್ತಿ ವಶಕ್ಕೆ : ಮಾಹಿತಿ
ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಪೊಲೀಸರು ವಶಕ್ಕೆ ಪಡೆದುಕೊಂಡಿರುವ ವ್ಯಕ್ತಿ ಯಾರು? ಆತನ ಹಿನ್ನೆಲೆ ಏನು ಎಂಬುದರ ಮಾಹಿತಿ ತಿಳಿದು ಬಂದಿಲ್ಲ. ಸದ್ಯ ವಶದಲ್ಲಿರೋ ವ್ಯಕ್ತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತಿ ಇದೆ. ಬೆದರಿಕೆ ಕರೆ ಬೆನ್ನಲ್ಲೇ ರಾಜಭವನದ ಬಳಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರಾಜಭವನದಲ್ಲಿ ಕೆಲಸ ಮಾಡುವ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!