spot_img
Sunday, April 26, 2026
spot_img

ಇಂದು ರಾಜಸ್ಥಾನದ ನೂತನ ಮುಖ್ಯಮಂತ್ರಿ ಆಯ್ಕೆ : ಸಂಜೆ ನಡೆಯುವ ಶಾಸಕರ ಸಭೆಗೆ ಕೇಂದ್ರದ ವೀಕ್ಷಕರಾಗಿ ರಾಜನಾಥ್ ಸಿಂಗ್ ಭಾಗಿ

ಜನಪ್ರತಿನಿಧಿ ವಾರ್ತೆ (ರಾಜಸ್ಥಾನ) : ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡು ವಾರ ಕಳೆದರೂ, ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಬಿಜೆಪಿ ಇನ್ನೂ ಅಧಿಕೃತವಾಗಿ ಆಯ್ಕೆ ಮಾಡಿಲ್ಲ. ಇಂದು(ಮಂಗಳವಾರ) ಜೈಪುರದಲ್ಲಿ ನೂತನ ಮುಖ್ಯಮಂತ್ರಿ ಆಯ್ಕಗೆ ಶಾಸಕರ ಔಪಚಾರಿಕ ಸಭೆ ಕರೆದಿದ್ದು, ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವೀಕ್ಷಕರಾಗಿ ಇರಲಿದ್ದಾರೆ, ಸಹ ವೀಕ್ಷಕರಾಗಿ ಸರೋಜ್ ಪಾಂಡೆ ಮತ್ತು ವಿನೋದ್ ತಾವ್ಡೆ ಅವರು ಭಾಗವಹಿಸಲಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ರಾಜ್ಯಾಧ್ಯಕ್ಷ ಸಿ.ಪಿ.ಜೋಶಿ, ಉಸ್ತುವಾರಿ ಅರುಣ್ ಸಿಂಗ್ ಸಭೆಯ ಸಿದ್ಧತೆಗಳ ಮೇಲುಸ್ತುವಾರಿ ವಹಿಸಿದ್ದಾರೆ. ಹೊಸದಾಗಿ ಆಯ್ಕೆಯಾಗಿರುವ ಶಾಸಕರ ನೋಂದಣಿ ಪ್ರಕ್ರಿಯೆ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಎಲ್ಲಾ ಬಿಜೆಪಿ ಶಾಸಕರು ಸಭೆಗೆ ಹಾಜರಾಗುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದಲಿತ ನಾಯಕರೊಬ್ಬರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆಗಳ ಕುರಿತು ಪ್ರತಿಕ್ರಿಯಿಸಿದ ಅರುಣ್ ಸಿಂಗ್, ‘ಎಲ್ಲವೂ ಸಂಜೆ ಹೊತ್ತಿಗೆ ಬಹಿರಂಗಗೊಳ್ಳಲಿದೆ’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅಶ್ವಿನಿ ವೈಷ್ಣವ್ ರೇಸ್‌ನಲ್ಲಿದ್ದಾರೆ ಎಂದು ವರದಿಯಾಗಿದೆ.

ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರ ಔಪಚಾರಿಕ ಆಯ್ಕೆಗೂ ಮುನ್ನ ವೀಕ್ಷಕರು ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ನವೆಂಬರ್ 25 ರಂದು ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 199 ಕ್ಷೇತ್ರಗಳ ಪೈಕಿ ಪೈಕಿ ಬಿಜೆಪಿ 115 ಕ್ಷೇತ್ರಗಳನ್ನು ಪಡೆದುಕೊಂಡಿದೆ.

ಇನ್ನು, ರಾಜಸ್ಥಾನದ ರಾಜಕೀಯ ಊಹಾಪೋಹಗಳ ನಡುವೆ, ವಸುಂಧರಾ ರಾಜೆ ಅವರನ್ನು ಶಾಸಕರು ಭೇಟಿ ಮಾಡಿ ಶಕ್ತಿ ಪ್ರದರ್ಶನ ತೋರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!