spot_img
Sunday, April 26, 2026
spot_img

ಬರುವ ವರ್ಷದಿಂದಲೇ ಶಾಲಾ ಮಕ್ಕಳಿಗೆ ʼಸೈಕಲ್‌ ಗ್ಯಾರಂಟಿʼ  : ಸಚಿವ ಮಧು ಬಂಗಾರಪ್ಪ ಆಶ್ವಾಸನೆ

ಜನಪ್ರತಿನಿಧಿ ವಾರ್ತೆ(ಬೆಂಗಳೂರು) : ಬರುವ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಶ್ವಾಸನೆ ಕೊಟ್ಟಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ.

ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ರವಿಕುಮಾರ್ ಒತ್ತಾಯ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಣೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಸೈಕಲ್ ಹಿಂದಿನ ಸರ್ಕಾರ ನಿಲ್ಲಿಸಿದೆ. ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ನಾನು ಮಾತಾಡಿದ್ದೇನೆ. ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

1-8ನೇ ತರಗತಿ ಮಕ್ಕಳಿಗೆ ನೀಡಲಾಗುತ್ತಿದ್ದ ಮೊಟ್ಟೆ, ಚಿಕ್ಕಿಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 9 ಮತ್ತು 10ನೇ ತರಗತಿಗೂ ವಿಸ್ತರಿಸಿದ್ದೇವೆ. ಕಳೆದ ಸರ್ಕಾರದ ಅವಧಿಯಲ್ಲಿ ಸಮವಸ್ತ್ರ ಖರೀದಿಯಲ್ಲಿ ಕ್ವಾಲಿಟಿ ಸಮಸ್ಯೆ ಆಗಿದೆ. ಹಾಗಾಗಿ ಒಪನ್ ಟೆಂಡರ್ ಮೂಲಕ ಸಮವಸ್ತ್ರ ಖರೀದಿ ಆಗುತ್ತದೆ. ಈ ವರ್ಷದ ಟೆಂಡರ್ ಪ್ರಕ್ರಿಯೆ ಮುಗಿದು ಹೋಗಿದೆ. ಮುಂದಿನ ವರ್ಷದಿಂದ ಉತ್ತಮ ಕ್ವಾಲಿಟಿ ಸಮವಸ್ತ್ರ ನೀಡಲು ಕ್ರಮವಹಿಸುತ್ತೇವೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!