spot_img
Sunday, April 26, 2026
spot_img

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಭಕ್ತಿ ಸಂಗೀತ ಕಾರ್ಯಕ್ರಮ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಸರಣಿ ಕಾರ್ಯಕ್ರಮದಡಿ ಸತತ 90ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಗೊಂಬೆ ಮನೆಯಲ್ಲಿ ಸಾಂಗವಾಗಿ ನಡೆಯಿತು. ಫಣಿಗಿರಿ ಪ್ರತಿಷ್ಠಾನ, ಶಿರೂರು ಇದರ ಅಧ್ಯಕ್ಷರಾದ ಉಮೇಶ್ ಶಿರೂರು ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಂದಾಪುರದ ಪ್ರಸಿದ್ಧ ಲೆಕ್ಕ ಪರಿಶೋಧಕ ವಾಸುದೇವ ಶ್ಯಾನುಭಾಗ್, ಹಾರ್‍ಮೋನಿಯಂ ವಾದಕ ನಾಗೇಶ್ ಶೆಣೈ ಹಾಗೂ ಅಕಾಡೆಮಿಯ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್‌ರರು ಉಪಸ್ಥಿತರಿದ್ದರು.

ಮಂಗಳೂರಿನ ಖ್ಯಾತ ಸಂಗೀತಗಾರ ಗಿರೀಶ್ ನಾಗೇಶ್ ಪ್ರಭುರವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಗೋವಿಂದ ಗಾಣಿಗ, ಬೀಜಮಕ್ಕಿಯವರನ್ನು ಸನ್ಮಾನಿಸಿ ಆರ್ಥಿಕ ಸಹಾಯ ನೀಡಲಾಯಿತು.

ಇಂಜಿನಿಯರಿಂಗ್ ವಿದ್ಯಾರ್ಥಿನಿ ಕುಮಾರಿ ಶ್ರೀರಕ್ಷಾಳಗೆ ವಿದ್ಯಾರ್ಥಿವೇತನ ನೀಡಲಾಯಿತು. ನಂತರ ಗಿರೀಶ್ ನಾಗೇಶ್ ಪ್ರಭುರವರು ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಇವರಿಗೆ ತಬಲಾದಲ್ಲಿ ಉಪೇಂದ್ರ ಮಲ್ಯ, ಹಾರ್‍ಮೋನಿಯಂ ನಲ್ಲಿ ನಾಗೇಶ್ ಶೆಣೈ ಹಾಗೂ ತಾಳದಲ್ಲಿ ವೃಷಭ ಮಲ್ಯರವರು ಸಾಥ್ ನೀಡಿದರು. ನಾಗೇಶ್ ಶ್ಯಾನುಭಾಗ್, ಬಂಟ್ವಾಡಿಯವರು ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!