spot_img
Wednesday, January 22, 2025
spot_img

ಸರ್ವೋಚ್ಛ ನ್ಯಾಯಾಲಯ  ಏಕ್‌ ಭಾರತ್‌, ಶ್ರೇಷ್ಠ ಭಾರತ್‌ ಎಂಬ ಮನೋಭಾವವನ್ನು ಬಲಪಡಿಸಿದೆ : ನರೇಂದ್ರ ಮೋದಿ

ಜನಪ್ರತಿನಿಧಿ ವಾರ್ತೆ (ನವ ದೆಹಲಿ )  : ಜಮ್ಮು ಮತ್ತು ಕಾಶ್ಮೀರಕ್ಕೆ 370ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಹಾಗೂ ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ (ಜೆ & ಕೆ ಮತ್ತು ಲಡಾಖ್) ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದೆ.

ಈ ಬೆನ್ನಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಆಗಸ್ಟ್‌ 5ರ ಐತಿಹಾಸಿಕ ದಿನದಂದು ನಮ್ಮ ಸಂಸತ್‌ 370ನೇ ವಿಧಿಯನ್ನು ರದ್ದುಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಅಂಗೀಕರಿಸಿತು. ಅಂದಿನಿಂದ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ನ್ಯಾಯಾಲಯದ ತೀರ್ಪು ಡಿಸೆಂವರ್‌ 2023ರಲ್ಲಿ ಬಂದಿದೆ. ಆದರೇ ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಾದ್ಯಂತ ಅಭಿವೃದ್ಧಿಯ ಅಲೆಯನ್ನು ಜನತಾ ನ್ಯಾಯಾಲಯ 4 ವರ್ಷಗಳಿಂದ ನೋಡಿದೆ. 370 ಮತ್ತು 35(ಎ) ವಿಧಿಗಳನ್ನು ರದ್ದುಗೊಳಿಸುವ ಸಂಸತ್ತಿನ ನಿರ್ಧಾರಕ್ಕೆ ಬೆಂಬಲ ಸೂಚಿಸಿದೆ ಎಂದಿದ್ದಾರೆ.

ಜಮ್ಮು-ಕಾಶ್ಮೀರದ ಜನರಿಗೆ ಸೇವೆ ಸಲ್ಲಿಸುವಾಗ, ನಾವು ಮೂರು ಆಧಾರ ಸ್ತಂಭಗಳಿಗೆ ಆದ್ಯತೆ ನೀಡಿದ್ದೇವೆ. ನಾಗರಿಕ ಸಮಸ್ಯೆಗಳನ್ನು ಅರಿಯುವುದು, ಸರ್ಕಾರದ ಕಾರ್ಯಗಳ ಮೂಲಕ ವಿಶ್ವಾಸ ಬೆಳೆಸುವುದು ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುವುದು ಎಂದು ಹೇಳಿದ್ದಾರೆ.

ಭಾರತದ ಸರ್ವೋಚ್ಛ ನ್ಯಾಯಾಲಯವೂ 370 ಮತ್ತು 35(ಎ) ವಿಧಿಗಳ ರದ್ಧತಿ ಬಗ್ಗೆ ಡಿಸೆಂಬರ್‌ 11ರಂದು ಐತಿಹಾಸಿಕ ತೀರ್ಪು ನೀಡಿದೆ. ಸರ್ವೋಚ್ಛ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಪ್ರತಿಯೊಬ್ಬ ಭಾರತೀಯನು ಗೌರವಿಸುವ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿದಿದೆ. 370ನೇ ವಿಧಿ ಶಾಶ್ವತವಲ್ಲ ಎಂಬ ಅಂಶವನ್ನು ನ್ಯಾಯಾಲಯ ಗುರುತಿಸಿದೆ.

ಏಕ್‌ ಭಾರತ್‌, ಶ್ರೇಷ್ಠ ಭಾರತ್‌ ಎಂಬ ಮನೋಭಾವವನ್ನು ಬಲಪಡಿಸಿದೆ. ಏಕತೆ ಮತ್ತು ಉತ್ತಮ ಆಡಳಿತಕ್ಕೆ ಪ್ರತಿಬದ್ಧವಾಗಿರುವುದೇ ನಮ್ಮ ಗುರುತು ಎಂಬುವುದನ್ನು ಇದು ತೋರಿಸುತ್ತದೆ. ಇಂದು ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ ಜನಿಸಲಿರುವ ಪ್ರತಿಯೊಂದು ಮಗುವಿಗೂ ಸ್ವಚ್ಛ ಸುಂದರ ಪರಿಸರ ಸಿಗಲಿದೆ, ಅಲ್ಲಿ ಜನರ ಕನಸುಗಳು ಬಂಧಿಯಾಗದೆ ಭವಿಷ್ಯವು ಸಾಕಾರಗೊಳ್ಳಲಿದೆ. ಜಮ್ಮು ಕಾಶ್ಮೀರದಲ್ಲಿ ನಿರಾಸೆ ಮತ್ತು ಹತಾಶೆ ಕೊನೆಗೊಂಡಿದ್ದು, ಅಭಿವೃದ್ಧಿ, ಪ್ರಜಾಪ್ರಭುತ್ವ ಮತ್ತು ಘನತೆ ಹೆಚ್ಚುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!