spot_img
Wednesday, January 22, 2025
spot_img

ರಾಜಧಾನಿ ಬೆಂಗಳೂರಿನ 6 ಕಡೆಗಳಲ್ಲಿ ಎನ್ಐಎ ದಾಳಿ | ತೀವ್ರ ಪರಿಶೀಲನೆ  

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ದೇಶದಾದ್ಯಂತ ಉಗ್ರರು ದುಷ್ಕೃತ್ಯ ನಡೆಸಲು ಉಗ್ರರು ಸಂಚು ಹೂಡಿರುವ ಹಿನ್ನೆಲೆಯಲ್ಲಿ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು(ಬುಧವಾರ) ಬೆಳಗಿನ ಜಾವ ರಾಜಧಾನಿ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ,  ಪರಿಶೀಲನೆ ನಡೆಸುತ್ತಿದೆ. ಶಂಕಿತ ಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗೂ ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ಮುಂದುವರಿಸಿದೆ.

ನಗರದಲ್ಲಿ ಬಂಧನವಾಗಿದ್ದ ಐವರು ಶಂಕಿತ ಉಗ್ರರ ಪ್ರಕರಣಕ್ಕೆ  ಸಂಬಂಧಿಸಿದಂತೆ ದಾಳಿಗಳು ನಡೆದಿವೆ. ಮುದಾಸಿರ್, ಜಾಹಿದ್, ತಬ್ರೇಜ್ ಮಹಮದ್ ಉಮರ್ ಸೇರಿ 5 ಜನರನ್ನು ಬಂಧಿಸಲಾಗಿತ್ತು.

ಹೆಬ್ಬಾಳ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಮೊದಲು ಸಿಸಿಬಿ ಅಧಿಕಾರಿಗಳು ಜುಲೈ 1ರಂದು ದಾಳಿ ಮಾಡಿದ್ದರು. ಈ ವೇಳೆ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ಈ ಪ್ರಕರಣ ಇತ್ತೀಚೆಗಷ್ಟೇ ಎನ್‌ಐಎಗೆ ವರ್ಗಾವಣೆಗೊಂಡಿತ್ತು.

ವಿಚಾರಣೆಯ ವೇಳೆ ವಿದೇಶದಿಂದ ಜುನೈದ್ ಎಂಬ ಉಗ್ರ ಆಪರೇಟ್ ಮಾಡುತ್ತಾ ಇದ್ದದ್ದು ಬೆಳಕಿಗೆ ಬಂದಿತ್ತು. ಜೊತೆಗೆ ಸರಣಿ ಬಾಂಬ್ ಬ್ಲಾಸ್ಟ್ ರೂವಾರಿ ನಾಸೀರ್ ಜೈಲಿನಲ್ಲಿ ಈ ಶಂಕಿತರಿಗೆ ಭಯೋತ್ಪಾದಕ ಕೃತ್ಯಗಳ ತರಬೇತಿ ನೀಡಿದ್ದ ಎಂಬುದು ತಿಳಿದುಬಂದಿತ್ತು.

ಈ‌ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಇಂದು ನಡೆಸಿರುವ ದಾಳಿಯಲ್ಲಿ ಆರು ಕಡೆ ಮನೆಗಳ ಪರಿಶೀಲನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!