spot_img
Sunday, April 26, 2026
spot_img

ಅಧಿವೇಶನದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಿಎಂ ಮಾತುಕತೆ

ಜನಪ್ರತಿನಿಧಿ ವಾರ್ತೆ (ಬೆಳಗಾವಿ) : ವಿಧಾನಸಭಾ ಅಧಿವೇಶನ ವೀಕ್ಷಿಸಲು ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಹೊತ್ತು ಸಮಯ ಕಳೆದಿದ್ದಾರೆ. ಮಾತ್ರವಲ್ಲದೇ ತಮ್ಮ ಅಧಿಕೃತ ‌ʼಎಕ್ಸ್ʼ ಖಾತೆಯಲ್ಲಿ ವಿದ್ಯಾರ್ಥಿಗಳೊಂದಿಗೆ ತೆಗೆಸಿಕೊಂಡ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಒಂದಷ್ಟು ಹೊತ್ತು ಮಾತನಾಡುತ್ತಾ, ಸರ್ಕಾರದ ಕಾರ್ಯವೈಖರಿ, ಅಭಿವೃದ್ಧಿ ಕಾರ್ಯಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಅವರಲ್ಲಿನ ಕುತೂಹಲಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದೆ ಎಂದು ಅವರು ತಮ್ಮ ಅಧಿಕೃತ ʼಎಕ್ಸ್‌ʼ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ವೇಳೆ ಶಕ್ತಿ ಯೋಜನೆಯಿಂದ ತಮಗೆ ಸಾಕಷ್ಟು ಅನುಕೂಲವಾಗಿದೆ ಎಂದು ಹೆಣ್ಣುಮಕ್ಕಳು ಸಂತಸ ವ್ಯಕ್ತಪಡಿಸಿ, ಯೋಜನೆ ಜಾರಿಗೊಳಿಸಿದ್ದಕ್ಕಾಗಿ ನನಗೆ ಧನ್ಯವಾದ ತಿಳಿಸಿದರು ಎಂದು ಕೂಡ ಅವರು ವ್ಯಕ್ತಪಡಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್‌ ಯು.ಟಿ ಖಾದರ್‌ ಮುಖ್ಯಮಂತ್ರಿಗಳೊಂದಿಗೆ ಸಾಥ್‌ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!