Sunday, September 8, 2024

ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ : ಡಿಕೆಶಿ

ಜನಪ್ರತಿನಿಧಿ ವಾರ್ತೆ(ಬೆಳಗಾವಿ) : ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ‘ವಾರಾಂತ್ಯದಲ್ಲಿ ಸುವರ್ಣ ವಿಧಾನ ಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿ ತೆರೆದು ಪ್ರವಾಸಿ ತಾಣವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ’ ಎಂದು ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದ ಆವರಣದಲ್ಲಿ ನಡೆದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸುವರ್ಣ ಸೌಧದ ಪ್ರಮುಖ ಕೆಲವು ಸ್ಥಳಗಳಲ್ಲಿ ಫೋಟೊಶೂಟ್ ಮಾಡಕೊಳ್ಳುವುದಕ್ಕೆ ಬೇಕಾದ ವ್ಯವಸ್ಥೆಗಳನ್ನು ನಿರ್ಮಾಣ ಮಾಡುವ ಮೂಲಕ ಪ್ರವಾಸಿಗರನ್ನು ಆಕರ್ಷಿಸಲಾಗುವುದು. ಈ ಬಗ್ಗೆ ಈಗಾಗಲೇ ವಿಧಾನಸಭೆ ಹಾಗೂ ಪರಿಷತ್ತಿನ ಮಾಜಿ ಸಭಾಪತಿಗಳು ಸಲಹೆಗಳನ್ನು ನೀಡಿದ್ದು, ನಮ್ಮ ಸರ್ಕಾರವೂ ಈ ಬಗ್ಗೆ ಚಿಂತನೆ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

‘ನಾನು ಕರ್ನಾಟಕದ ಇತಿಹಾಸವನ್ನು ಓದುತ್ತಿದ್ದೆ. ಕೆಬಿ ಕೋಳಿವಾಡ್ (ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್) ಅವರು ಕೂಡ ಸುವರ್ಣ ವಿಧಾನ ಸೌಧವನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಆಲೋಚನೆಯನ್ನು ಬೆಂಬಲಿಸಿದ್ದಾರೆ. ಇಂದು ಈ ಸುವರ್ಣ ಸಂಭ್ರಮದಲ್ಲಿ ಅವರನ್ನು ಗೌರವಿಸುವ ಭಾಗ್ಯವೂ ನಮಗೆ ಸಿಕ್ಕಿದೆ’ ಎಂದರು.

ಶಿವಕುಮಾರ್ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ 50ನೇ ಕರ್ನಾಟಕ ಸುವರ್ಣ ಸಂಭ್ರಮ ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಅವರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!