spot_img
Wednesday, January 22, 2025
spot_img

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ : ಪ್ರಧಾನಿ ಮೋದಿ, ಅಮಿತ್‌ ಶಾ ಭಾಗಿ  

ಜನಪ್ರತಿನಿಧಿ ವಾರ್ತೆ (ಮಧ್ಯಪ್ರದೇಶ) : ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಇಂದು(ಬುಧವಾರ) ಪ್ರಮಾಣ ವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸಮಾರಂಭಕ್ಕೆ ತೆರಳುವ ಮುನ್ನ ಮೋಹನ್ ಯಾದವ್ ಭೋಪಾಲ್‌ನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಜನಸಂಘದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಮತ್ತು ಬಿಜೆಪಿಯ ಸಂಸ್ಥಾಪಕ ವಿಚಾರವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಗೌರವ ಸಲ್ಲಿಸಿದರು.

ಮೋಹನ್‌ ಯಾದವ್‌ ಮೂಲತಃ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಂಘದಿಂದ ರಾಜಕೀಯ ಪ್ರವೇಶ ಪಡೆದವರು. ರಾಜ್ಯದ ಜನಸಂಖ್ಯೆಯ ಶೇಕಡಾ 48 ಕ್ಕಿಂತ ಹೆಚ್ಚು ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಸೇರಿದವರಾಗಿದ್ದು, ಅವರನ್ನು ಬಿಜೆಪಿ ಹೈಕಮಾಂಡ್‌ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ.

ಯಾದವ್ ಅವರು 2013 ರಲ್ಲಿ ಮೊದಲ ಬಾರಿಗೆ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಅವರು 2018 ರಲ್ಲಿ ಮತ್ತು 2023 ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಗೊಂಡಿದ್ದರು.

ಮೋಹನ್ ಯಾದವ್  ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಹೆಸರಾಂತ ಉದ್ಯಮಿಯೂ ಆಗಿರುವ ಇವರು ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!