spot_img
Friday, April 24, 2026
spot_img

ರೈತರ ಸಂಕಷ್ಟದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಪಶು ಆಹಾರದ ದರವನ್ನು ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ : ಬಿವೈವಿ  

ಜನಪ್ರತಿನಿಧಿ ವಾರ್ತೆ(ಬೆಂಗಳೂರು) : ಬರಗಾಲದ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಪಶು ಆಹಾರದ ದರವನ್ನು ಹೆಚ್ಚಳ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಅಧಿವೇಶನದಲ್ಲಿ ಮಾತನಾಡಿದ ಅವರು, ಸಾಲವನ್ನು ತೀರಿಸುವುದಕ್ಕೆ ಸಾಧ್ಯವಾಗದೇ, ರೈತರು ಗುಳೆ ಹೋಗುತ್ತಿದ್ದಾರೆ. ಸುಮಾರು 456ಕ್ಕೂ ಹೆಚ್ಚು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಅವರು ಟೀಕೆ ಮಾಡಿದ್ದಾರೆ.

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ದಿನಕ್ಕೆ ಸರಿಯಾಗಿ 7 ತಾಸು 3 ಫೇಸ್ ವಿದ್ಯುತ್ ನೀಡುವ ಕೆಲಸವನ್ನು ಮಾಡಿಲ್ಲ. ಬರದ ಕಷ್ಟಕರ ಸಂದರ್ಭದಲ್ಲಿ ರೈತರಿಗೆ ಸ್ಪಂದಿಸಬೇಕಿದ್ದ ರಾಜ್ಯ ಸರ್ಕಾರ, ಪಶು ಆಹಾರದ ದರವನ್ನೂ ಸಹ ಹೆಚ್ಚಿಸಿ, ಗಾಯದ ಮೇಲೆ ಬರೆ ಎಳೆಯುವಂತಹ ಕೆಲಸವನ್ನು ಮಾಡಿದೆ ಎಂದು ಅವರು ಕಿಡಿ ಕಾರಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!