spot_img
Friday, April 24, 2026
spot_img

ಸಂಸತ್‌ನಲ್ಲಿ ಅಶ್ರುವಾಯು ಸಿಡಿಸಿದ ಪ್ರಕರಣ : ಭದ್ರತಾ ಲೋಪದ ಬಗ್ಗೆ ಬಿಜೆಪಿ ನಾಯಕರು ತುಟಿ ಬಿಚ್ಚದಿರುವುದೇಕೆ? : ಕಾಂಗ್ರೆಸ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಸಂಸತ್‌ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ಸದನಕ್ಕೆ ನುಗ್ಗಿ ಅಶ್ರುವಾಯು ಸಿಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಬಿಜೆಪಿಯನ್ನು ತರಾಟಗೆ ತೆಗೆದುಕೊಂಡಿದೆ.

ಈ ಬಗ್ಗೆ ಸಾಮಾಜಿಕ ಮೈಕ್ರೋ ಬ್ಲಾಗಿಂಗ್‌ ಖಾತೆಯ ಮೂಲಕ ಬಿಜೆಪಿಯನ್ನು ತಿವಿದ ಕಾಂಗ್ರೆಸ್‌, ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹರಿಂದ. ಈ ದಾಳಿಕೊರರು ಪ್ರತಾಪ್‌ ಸಿಂಹ ಅವರ ಆಪ್ತ ವಲಯದವರೇ? ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ? ಈ ಎಲ್ಲಾ ಸಂಗತಿಗಳ ತನಿಖೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ? ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯಲ್ಲಿ ಲೋಪವೂ ನಡೆಯುತ್ತಿರುವುದೇಕೆ? ಎಂದು ಪ್ರಶ್ನೆ ಮಾಡಿದೆ.

ಮಾತ್ರವಲ್ಲದೇ, ಸಂಸತ್ ಭವನದೊಳಗೆ ಟಿಯರ್ ಗ್ಯಾಸ್ ಸ್ಪೋಟಿಸಿದ ಆಗಂತುಕರಿಗೆ ಅಕಸ್ಮಾತ್ ಕಾಂಗ್ರೆಸ್ ಸಂಸದರಿಂದ ಪಾಸ್ ಸಿಕ್ಕಿದಿದ್ದರೆ ಬಿಜೆಪಿಗರು ಹೇಗೆ ವರ್ತಿಸುತ್ತಿದ್ದರು? ಈಗೇಕೆ ಬಿಜೆಪಿ ನಾಯಕರು ಏನೂ ಆಗಿಯೇ ಇಲ್ಲ ಎಂಬಂತೆ ಮುಗುಮ್ಮಾಗಿದ್ದಾರೆ? ಭದ್ರತಾ ಲೋಪದ ಬಗ್ಗೆ ಬಿಜೆಪಿ ನಾಯಕರು ತುಟಿ ಬಿಚ್ಚದಿರುವುದೇಕೆ? ದೇಶ ರಕ್ಷಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿರುವುದಕ್ಕೆ ಇದು ಸ್ಪಷ್ಟ ಉದಾಹರಣೆಯಲ್ಲವೇ ಎಂದು ರಾಜ್ಯ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!