spot_img
Friday, April 24, 2026
spot_img

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಒಂದೇ ಒಂದು ರೂ. ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ : ಗೋವಿಂದ ಕಾರಜೋಳ ಆರೋಪ

ಜನಪ್ರತಿನಿಧಿ ವಾರ್ತೆ(ಬೆಳಗಾವಿ) : ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಕೂಡ ಯಾವುದೇ ಯೋಜನೆಗೆ ಚಾಲನೆ ನೀಡಿಲ್ಲ. ಯಾವುದೇ ಮಂಜೂರಾತಿ ನೀಡಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯ ಭರವಸೆ ಪೂರೈಸುವುದರಲ್ಲೇ ಕಾಲ ಕಳೆದಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ನೀಡುತ್ತೇವೆ ಎಂದಿದ್ದರು, ಅರ್ಧದಷ್ಟು ಮಂದಿಗೂ ಹಣ ಸಿಕ್ಕಿಲ್ಲ. ಪದವಿಧರರಿಗೆ, ಡಿಪ್ಲಮೋ ಪದವೀಧರರಿಗೆ ನೀಡುವ ಯುವನಿಧಿಯೂ ಇನ್ನೂ ಆರಂಭವಾಗಿಲ್ಲ.  ಷರತ್ತುಗಳನ್ನು ದಿನನಿತ್ಯ ಹೆಚ್ಚು ಹೇರುತ್ತಿದ್ದಾರೆ. ಪದವೀಧರರು ಯಾರು ನಿರುದ್ಯೋಗಿಗಳಿದ್ದಾರೋ ಅವರೆಲ್ಲರಿಗೂ ಯುವನಿಧಿ ನೀಡಬೇಕು ಎಂದು ಹೇಳಿದ್ದೇವೆ. ಈಗಲೂ ಅದನ್ನೇ ಒತ್ತಾಯ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಈ ಧೋರಣೆ ಬಗ್ಗೆ ಹೋರಾಟ ಆರಂಭಿಸಿದ್ದೇವೆ. ರಾಜ್ಯದಾದ್ಯಂತ ಹೋರಾಟ ನಡೆಸುತ್ತೇವೆ. ನಮ್ಮ ಸರ್ಕಾರವಿದ್ದಾಗ, ಬೆಳಗಾವಿ ಅಧಿವೇಶನವಾದಾಗ 22 ಸಾವಿರ ಕೋಟಿ ರೂ. ಯೋಜನೆಗಳಿಗೆ, ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಕೆಲಸ ಆರಂಭಿಸಿದ್ಧೇವು. ಈ ಸರ್ಕಾರ ಬಂದ ಮೇಲೆ ಗುತ್ತಿಗೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಪರ್ಸಂಟೇಜ್‌ ಕೇಳುತ್ತಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ನನ್ನ ರಾಜಕೀಯ ಅನುಭವದಲ್ಲಿ ಇಂತಹ ಕೆಟ್ಟ, ಭ್ರಷ್ಟ ಸರ್ಕಾರವನ್ನು ನಾನೆಂದೂ ನೋಡಿರಲಿಲ್ಲ. ಬೆಳಗಾವಿಯಲ್ಲಿ ಕಾಟಾಚಾರಕ್ಕೆ ಅಧಿವೇಶನ ನಡೆಸಿದ್ದಾರೆ. ಹೊಸ ಮಂಜೂರಾತಿ ಏನೂ ಮಾಡಿಲ್ಲ. ಕುಡಿಯುವ ನೀರು ಯೋಜನೆಗಳಿಗೂ ಮಂಜೂರಾತಿ ನೀಡಿಲ್ಲ.  ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ಮಂಜೂರು ಮಾಡಿದ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿಲ್ಲ.  ಮಹಾದಾಯಿ, ಕಳಸಾ ಬಂಡೂರಿ ಯೋಜನೆ ಬಗ್ಗೆ ನಮ್ಮ ಸರ್ಕಾರ ಇದ್ದ ಸಂದರ್ಭದಲ್ಲಿ ಆಡಳಿತಾತ್ಮಕ ಮಂಜೂರಾತಿ ಕೊಟ್ಟು 995 ಕೋಟಿ ರೂ. ಟೆಂಡರ್‌ ಕರೆದಿದ್ದೇವು. ಅದನ್ನೂ ಕೂಡ ಈ ಸರ್ಕಾರ ಬದಿಗೊತ್ತಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ತಂದಿದ್ದೇವು. ಬಹಳ ಪ್ರಮುಖವಾಗಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದೇವು. ಆದರೇ, ಈ ಸರ್ಕಾರದ ಅವಧಿಯಲ್ಲಿ ಆ ಎಲ್ಲಾ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಕಾಂಗ್ರೆಸ್‌ ಸರ್ಕಾರ ಉತ್ತರ ಕರ್ನಾಟಕದ ವಿಚಾರದಲ್ಲಿ ಮಲತಾಯಿ ಧೋರಣೆ ಮಾಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಒಂದೇ ಒಂದು ರೂಪಾಯಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ಬರಗಾಲ ತಾಂಡವಡುತ್ತಿದೆ. ಬರ ಪರಿಹಾರ ಕೆಲಸಗಳನ್ನು ಆರಂಭಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!