spot_img
Friday, April 24, 2026
spot_img

ಡೆಸಿಬಲ್ ಮಟ್ಟವನ್ನು ಮೀರಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಕೆ ನಿಷೇಧಿಸಿದ ನೂತನ ಮುಖ್ಯಮಂತ್ರಿ

ಜನಪ್ರತಿನಿಧಿ ವಾರ್ತೆ(ನವ ದೆಹಲಿ) : ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮೋಹನ್ ಯಾದವ್ ಅವರು ತಮ್ಮ ಮೊದಲ ಮಹತ್ವದ ನಿರ್ಧಾರದಲ್ಲಿ ಡೆಸಿಬಲ್ ಮಟ್ಟವನ್ನು ಮೀರಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ (ಸಾರ್ವಜನಿಕ ತುರ್ತು ಸಂದರ್ಭಗಳಲ್ಲಿ ಹೊರತುಪಡಿಸಿ) ಧ್ವನಿವರ್ಧಕಗಳು ಮತ್ತು ಸಂಗೀತ ವ್ಯವಸ್ಥೆಗಳ ಬಳಕೆಯನ್ನು ನಿಷೇಧಿಸುವ ಜುಲೈ 2005 ರ ಸುಪ್ರೀಂ ಕೋರ್ಟ್ ತೀರ್ಪನ್ನು ಮುಖ್ಯಮಂತ್ರಿಗಳ ಈ ಆದೇಶವು ಉಲ್ಲೇಖಿಸಿದ್ದು, ಶಬ್ದ ಮಾಲಿನ್ಯದಿಂದಾಗುವ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ತಡೆಯುವುದರ ಬಗ್ಗೆ ಹೆಚ್ಚು ಗಮನ ನೀಡಿದೆ.

ಮಾತ್ರವಲದಲ್ಲದೇ, ತೆರೆದ ಪ್ರದೇಶಗಳಲ್ಲಿ ಮಾಂಸ ಮತ್ತು ಮೊಟ್ಟೆ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಆಹಾರ ಇಲಾಖೆ, ಪೊಲೀಸ್ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಗಳಿಂದ ಡಿಸೆಂಬರ್ 15 ರಿಂದ 31 ರವರೆಗೆ ತೆರೆದ ಪ್ರದೇಶಗಳಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧವನ್ನು ಜಾರಿಗೆ ತರಲು ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದರು.

ಜನವರಿ 22, 2024 ರಂದು ನಡೆಯಲಿರುವ ರಾಮಮಂದಿರದ ಪ್ರತಿಷ್ಠಾಪನೆಗಾಗಿ ಅಯೋಧ್ಯೆಗೆ ಪ್ರಯಾಣಿಸುವ ಭಕ್ತರನ್ನು ಮಧ್ಯಪ್ರದೇಶ ಸರ್ಕಾರ ಸ್ವಾಗತಿಸುತ್ತದೆ ಎಂದು ಅವರು ಘೋಷಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!