spot_img
Friday, April 24, 2026
spot_img

ಮಥುರಾ ಕೃಷ್ಣ ಜನ್ಮಭೂಮಿ ಪ್ರಕರಣ : ಮಂದಿರದ ಆವರಣದಲ್ಲಿರುವ ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

ಜನಪ್ರತಿನಿಧಿ ವಾರ್ತೆ  (ನವ ದೆಹಲಿ )  : ಕೃಷ್ಣಜನ್ಮಭೂಮಿ ವಿವಾದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡಿದೆ. ಜ್ಞಾನವಾಪಿ ರೀತಿಯಲ್ಲೇ ಇದೀಗ ಮಥುರಾ ಜನ್ಮಭೂಮಿ ಸರ್ವೇಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ. ಮಥುರಾದ ಕೃಷ್ಣಜನ್ಮಭೂಮಿ ಮಂದಿರದ ಆವರಣದಲ್ಲಿರುವ ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಅನುಮತಿ ನೀಡಲಾಗಿದೆ.

ಜಸ್ಟೀಸ್ ಮಯಾಂಕ್ ಕುಮಾರ್ ಜೈನ್ ಮಹತ್ವದ ಆದೇಶ ನೀಡಿದ್ದಾರೆ. ಸಮೀಕ್ಷೆ ನಡೆಸಲು ಕಮಿಷನರ್ ತಂಡ ರಚನೆ ಮಾಡಲು ಕೋರ್ಟ್ ಸೂಚಿನೆ ಮಾಡಿದೆ. ಮೂವರು ಅಧಿಕಾರಿಗಳ ಸಮಿತಿ ರಚಿಸಿ ಸರ್ವೆ ಮಾಡುವಂತೆ ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಭಗವಾನ್ ಶ್ರೀಕೃಷ್ಣ ವಿರಾಜಮಾನ ಸಮಿತಿ ಹಾಗೂ ಇತರ 7 ಮಂದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಈ ಆದೇಶ ನೀಡಿದೆ.  ಹಿಂದೂ ದೇವಸ್ಥಾನವನ್ನು ಬೀಳಿಸಿ ಮಥುರಾದ ಶಾಹಿ ಈದ್ಗಾ ಮಸೀದಿ ಕಟ್ಟಲಾಗಿದೆ. ಶಾಹಿ ಈದ್ಗಾ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹುಗಳಿವೆ. ಕಮಲದಳದ ಆಕಾರದಲ್ಲಿ ಕಂಬಗಳು ಹಿಂದೂ ದೇವಸ್ಥಾನ ಶೈಲಿಯಾಗಿದೆ. ಇದೇ ಕಂಬದಲ್ಲಿ ಹಿಂದೂ ದೇವಸ್ಥಾನ ಚಿಹ್ನೆಗಳು ಕಾಣುತ್ತಿದೆ. ಹೀಗಾಗಿ ಈದ್ಗಾ ಮಸೀದಿಯನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ನ ನ್ಯಾಯಪೀಠ, ಇದೀಗ ಜ್ಞಾನವಾಪಿ ಮಸೀದಿ ರೀತಿಯಲ್ಲೇ ಸರ್ವೇಗೆ ಅನುಮತಿ ನೀಡಿದೆ.

ಇನ್ನು, ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು. ದೇವಸ್ಥಾನದ ಮೇಲೆ ಮಸೀದಿ ಕಟ್ಟಲಾಗಿದೆಯೇ ಎನ್ನುವುದು ಪತ್ತೆ ಹಚ್ಚಲು ಸರ್ವೆಗೆ ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಕೃಷ್ಣ ಜನ್ಮಭೂಮಿ ಟ್ರಸ್ಟ್‌ ಸುಪ್ರೀಂ ಕೋರ್ಚ್‌ ಮೊರೆ ಹೋಗಿತ್ತು. ‘ಮಥುರಾದಲ್ಲಿ ಶಾಹಿ ಈದ್ಗಾ ಮಸೀದಿಯವರು ಕೃಷ್ಣ ಜನ್ಮ ಸ್ಥಳವನ್ನು ಆಕ್ರಮಿಸಿಕೊಂಡು ಮಸೀದಿ ನಿರ್ಮಿಸಿದ್ದಾರೆ. ಅಲ್ಲೇ ಶೌಚಾಲಯವನ್ನು ನಿರ್ಮಿಸಿ ಹಿಂದುಗಳ ಧಾರ್ಮಿಕತೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಮಸೀದಿಯನ್ನು ವೈಜ್ಞಾನಿಕ ಸಮೀಕ್ಷೆಗೆ ಒಳಪಡಿಸಿ ಅದರಲ್ಲಿ ದೇಗುಲ ಇದ್ದ ಕುರುಹುಗಳನ್ನು ಹುಡುಕಬೇಕು’ ಎಂದು ಟ್ರಸ್ಟ್‌ ಕೋರಿತ್ತು. ಆದರೆ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

ಜ್ಙಾನವಾಪಿ ಮಸೀದಿಯ ಸಮೀಕ್ಷೆಗೆ ಅನುಮತಿ ದೊರೆತ ಬೆನ್ನಲ್ಲೇ ಕೃಷ್ಣ ಜನ್ಮಭೂಮಿಯಲ್ಲೂ ಸಹ ದೇವಸ್ಥಾನದ ಮೇಲೆ ಮಸೀದಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಸ್ಥಳೀಯ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!