spot_img
Friday, April 24, 2026
spot_img

ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಬರದಿರುವುದು ರಾಜ್ಯದ ದುರ್ದೈವ : ಬಿಜೆಪಿ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಹರಿಹಾಯ್ದಿದೆ.

ಸಾಮಾಜಿಕ ಜಾಲತಾಣ ʼಎಕ್ಸ್‌ʼನಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದ ಬಿಜೆಪಿ, ಕೇವಲ ತಾಲಿಬಾನ್‌ನಂತಹ ಕ್ರೂರ ಪ್ರದೇಶದಲ್ಲಿ ನಡೆಯುತ್ತಿದ್ದ ಘಟನೆಗಳು ಈಗ ಕರ್ನಾಟಕದಲ್ಲಿ ನಡೆಯುತ್ತಿವೆ. ಇದು ಆರೂವರೆ ಕೋಟಿ ಕನ್ನಡಿಗರಿಗೆ ಕಾಂಗ್ರೆಸ್‌ ಸರ್ಕಾರ ನೀಡಿದ ಗಿಫ್ಟ್. ಕಾಂಗ್ರೆಸ್ ಸರ್ಕಾರವು ಈ ಆರು ತಿಂಗಳ ಆಡಳಿತದಲ್ಲಿ ದಿನಬಳಕೆ ವಸ್ತುಗಳ ಬೆಲೆಯೇರಿಕೆ ಜೊತೆ ಅಪರಾಧ ಪ್ರಕರಣಗಳನ್ನೂ ಏರಿಸಿದೆ ಎಂದು ಹೇಳಿದೆ.

ಕಾನೂನಿನ ಭಯವಿಲ್ಲದೆ ಹಾಡುಹಗಲೇ ಪುಂಡರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದಯನೀಯ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ. ರಾಜ್ಯ ಉಚ್ಛ ನ್ಯಾಯಾಲಯದಿಂದ ಪದೇ ಪದೆ ಛೀಮಾರಿ ಹಾಕಿಸಿಕೊಳ್ಳುತ್ತಿದ್ದರೂ, ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಬರದಿರುವುದು ರಾಜ್ಯದ ದುರ್ದೈವ ಎಂದು ತಿವಿದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!