spot_img
Friday, April 24, 2026
spot_img

ಭಂಡಾರ್ಕಾರ್ಸ್ ಕಾಲೇಜು : ಸಂಸ್ಕೃತ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಪ್ರಮಾಣಪತ್ರʼ ವಿತರಣಾ ಕಾರ್ಯಕ್ರಮ

ಜನಪ್ರತಿನಿಧಿ ವಾರ್ತೆ (ಕುಂದಾಪುರ) : ಡಿಸೆಂಬರ್ 13ರಂದು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ  ಸಂಸ್ಕೃತ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಪ್ರಮಾಣಪತ್ರʼ ವಿತರಣಾ ಕಾರ್ಯಕ್ರಮ ನಡೆಯಿತು.

ʼಶ್ರೀ ಸುರಸರಸ್ವತಿ ಸಭಾ, ಶೃಂಗೇರಿʼ ಇವರು ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಪ್ರಥಮಾ, ದ್ವಿತೀಯಾ, ತೃತೀಯಾ, ತುರೀಯಾ ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ʼಪ್ರಮಾಣಪತ್ರʼ ಮತ್ತು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ʼಬೆಳ್ಳಿ ಪದಕʼ ನೀಡಲಾಯಿತು. ಜೊತೆಗೆ *ಜ್ಯೋತಿಷ್ಯ ಸರ್ಟಿಫಿಕೇಟ್ ಕೋರ್ಸನ್ನು* ಪೂರೈಸಿದ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿಯವರು ʼಸಂಸ್ಕೃತ ದೇವ ಭಾಷೆಯಾಗಿದೆ, ಈ ಭಾಷೆ ತನ್ನದೇ ಆದ ಘನತೆ, ಗೌರವವನ್ನು ಹೊಂದಿದ್ದು ಎಲ್ಲಾ ಭಾಷೆಗಳ ಮಾತೃ ಭಾಷೆಯಾಗಿದೆ ಎಂದರು. ಹಾಗೂ ಇಂತಹ ಅರ್ಥಗರ್ಭಿತ ಕಾರ್ಯಕ್ರಮವನ್ನು ಮುಂದುವರೆಸಿಕೊಂಡು ಬಂದಿರುವುದಕ್ಕಾಗಿ ಸಂಸ್ಕೃತ ವಿಭಾಗದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಪ್ರೊ. ಸತ್ಯನಾರಾಯಣ ಹತ್ವಾರ್, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಕೆ. ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ. ಯಶವಂತಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕಿ ಗಾಯತ್ರಿ ಪ್ರಮಾಣಪತ್ರ ಪಡೆದ ವಿದ್ಯಾರ್ಥಿಗಳ ಹೆಸರನ್ನು ಓದಿದರು. ಗಣಿತ ವಿಭಾಗದ ಮುಖ್ಯಸ್ಥೆ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು ದ್ವಿತೀಯ ಬಿ.ಸಿ.ಎ. ವಿದ್ಯಾರ್ಥಿ ಶ್ರೀನಿಧಿ ಅಡಿಗ ಪ್ರಾರ್ಥನೆ ಮಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!