spot_img
Friday, April 24, 2026
spot_img

ಮಂಗಳೂರು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಡಿಆರ್‌ಡಿಒ ಸಿಬ್ಬಂದಿ !

ಜನಪ್ರತಿನಿಧಿ ವಾರ್ತೆ (ಮಂಗಳೂರು ) : 24 ವರ್ಷದ ಡಿಆರ್‌ಡಿಒ ಸಿಬ್ಬಂದಿಯೊಬ್ಬರು ಪುತ್ತೂರು ಸಮೀಪದ ಕಲ್ಲರ್ಪೆ ಗ್ರಾಮದ ಅವರ ನಿವಾಸದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಇಂದು(ಶುಕ್ರವಾರ) ತಿಳಿಸಿದ್ದಾರೆ.

ಮೃತರನ್ನು ಪುತ್ತೂರು ಸಮೀಪದ ಕಲ್ಲರ್ಪೆ ಗ್ರಾಮದ ನಿವಾಸಿ ಭರತ್ ಎಂದು ಗುರುತಿಸಲಾಗಿದೆ. ಬುಧವಾರ ತಡರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಭರತ್ ಎರಡು ತಿಂಗಳ ಹಿಂದಷ್ಟೇ ಡಿಆರ್‌ಡಿಒ ಹೈದರಾಬಾದ್ ಘಟಕಕ್ಕೆ ತಾತ್ಕಾಲಿಕವಾಗಿ ಸೇರ್ಪಡೆಗೊಂಡಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಇನ್ನು, ತಮ್ಮ ಹುದ್ದಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರೂ, ಅಂಗೀಕಾರಗೊಂಡಿರಲಿಲ್ಲ. ಬಳಿಕ ವಾರದ ಹಿಂದೆಯಷ್ಟೇ ಅವರು ಸ್ವಗ್ರಾಮಕ್ಕೆ ಮರಳಿದ್ದರು ಎನ್ನಲಾಗಿದೆ. ಸಂತ್ರಸ್ತರಿಗೆ ಗುರುವಾರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಿಂದ (ಡಿಆರ್‌ಡಿಒ) ಕರೆ ಬಂದಿದ್ದು, ಮರುದಿನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!