spot_img
Wednesday, January 22, 2025
spot_img

ಬೆಳಗಾವಿ ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣ : ಮಹಾಭಾರತದಲ್ಲಿ ದ್ರೌಪದಿಗೆ ಆದ ಘಟನೆಗಿಂತಲೂ ಘೋರ ಘಟನೆ ಇದು : ನಾಳೆ ರಾಜ್ಯಾದಾದ್ಯಂತ ಬಿಜೆಪಿ ಪ್ರತಿಭಟನೆ

ಜನಪ್ರತಿನಿಧಿ ವಾರ್ತೆ(ಬೆಳಗಾವಿ) : ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆಯನ್ನು ಖಂಡಿಸಿ ಬಿಜೆಪಿ ನಾಳೆ (ಡಿ.16) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ  ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದೆ.

ಡಿಸೆಂಬರ್ 11 ರಂದು ಬೆಳಗಾವಿಯ ವಂಟಮುರಿ ಗ್ರಾಮದಲ್ಲಿ ಸಂತ್ರಸ್ತೆಯ ಪುತ್ರ ತಮ್ಮದೇ ಸಮುದಾಯದ ಯುವತಿಯೊಂದಿಗೆ ಪರಾರಿಯಾದ ಬೆನ್ನಲ್ಲೇ  ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿತ್ತು.

ವರದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣದ ಎಂಟು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತ್ರಸ್ತೆಯನ್ನು ಭೇಟಿಯಾಗಿಲ್ಲ ಎಂದು ಕೂಡ ಅವರು ಆರೋಪಿಸಿದ್ದಾರೆ.

‘ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದು, ಇಡೀ ಸರ್ಕಾರ ಇಲ್ಲಿಯೇ ಮೊಕ್ಕಾಂ ಹೂಡಿರುವ ಬೆಳಗಾವಿಯಲ್ಲಿ ಇಂತಹ ಘಟನೆ ನಡೆದಿರುವುದು ಅಪರಾಧಿಗಳಲ್ಲಿ ಸರ್ಕಾರ ಮತ್ತು ಕಾನೂನು ಜಾರಿ ಸಂಸ್ಥೆಗಳ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಿರುವುದನ್ನು ತೋರಿಸುತ್ತದೆ’ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ತುಂಬಾ ಹದಗೆಟ್ಟಿದೆ. ಮಹಾಭಾರತದಲ್ಲಿ ದ್ರೌಪದಿಗೆ ಆದ ಘಟನೆಗಿಂತಲೂ ಘೋರ ಘಟನೆ ಇದಾಗಿದ್ದು, ಶ್ರೀಕೃಷ್ಣ ದ್ರೌಪದಿಯ ರಕ್ಷಣೆಗೆ ಬಂದಿದ್ದು, ಬೆಳಗಾವಿ ಘಟನೆಯಲ್ಲಿ ಯಾರೊಬ್ಬರೂ ಸಂತ್ರಸ್ತೆಗೆ ಸಹಾಯ ಮಾಡಲು ಬರಲಿಲ್ಲ ಎಂದು ಹೈಕೋರ್ಟ್ ಹೇಳಿದೆ ಎಂದರು. 

ನಾಳೆ ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲಿದ್ದಾರೆ. ಇಂದು ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯ ಜಿಲ್ಲಾ ಕೇಂದ್ರ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಪಕ್ಷ ನಿರ್ಧರಿಸಿದೆ ಎಂದು ಅವರು ಹೇಳಿದರು.

ಅಪರಾಜಿತಾ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಳಿ ಮತ್ತು ಲಾಕೆಟ್ ಚಟರ್ಜಿ ಸೇರಿದಂತೆ ನಾಲ್ವರು ಬಿಜೆಪಿ ಸಂಸದದ ತಂಡ ಶನಿವಾರ ಬೆಳಗಾವಿಗೆ ಭೇಟಿ ನೀಡಲಿದೆ. ಇವರೊಂದಿಗೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಂಚಿಯ ಮಾಜಿ ಮೇಯರ್ ಆಶಾ ಲಾಕ್ರಾ ಕೂಡ ಇರುತ್ತಾರೆ  ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!