spot_img
Sunday, June 14, 2026
spot_img

ಸಂಸತ್‌ ಭದ್ರತಾ ಲೋಪ ಪ್ರಕರಣ : ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ? : ಕಾಂಗ್ರೆಸ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಸಂಸತ್‌ನಲ್ಲಿ ಭದ್ರತಾ ಲೋಪ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ಟೀಕೆ ಮಾಡಿದೆ.

ತನ್ನ ಅಧಿಕೃತ ಮೈಕ್ರೋಬ್ಲಾಗಿಂಗ್‌ ʼಎಕ್ಸ್‌ʼ ಖಾತೆಯ ಮೂಲಕ ಟೀಕಸಿದ ಕಾಂಗ್ರೆಸ್‌, ಸಂಸತ್ ದಾಳಿಕೋರರಿಗೆ ಸಂಸದ ಪ್ರತಾಪ್ ಸಿಂಹ ಮೂರು ಬಾರಿ ಸಂಸತ್ ಪಾಸ್ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಪರಿಚಯ, ಆತ್ಮೀಯ ಒಡನಾಟ ಇಲ್ಲದೆ ಇದ್ದರೆ ಮೂರು ಬಾರಿ ಪಾಸ್ ವಿತರಿಸಲು ಸಾಧ್ಯವೇ ಇಲ್ಲ.

ಪ್ರತಾಪ್‌ ಸಿಂಹ ಅವರಿಗೂ ದಾಳಿಕೋರರಿಗೂ ಇರುವ ನಿಗೂಢ ಸಂಬಂಧದ ಬಗ್ಗೆ ತನಿಖೆ ಮಾಡದಿರುವುದೇಕೆ? ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ? ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ, ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹರವರ ರಕ್ಷಣೆಗೆ ನಿಂತಿರುವುದೇಕೆ? ಕೇವಲ ಭದ್ರತಾ ಲೋಪ ಎನ್ನುವುದನ್ನು ಬಿಂಬಿಸಿ ಕೈ ತೊಳೆದುಕೊಳ್ಳಲು ಹೊರಟಿರುವುದೇಕೆ ಕೇಂದ್ರ ಸರ್ಕಾರ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!