spot_img
Friday, April 24, 2026
spot_img

ಉತ್ತರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರದ ಸಂಕಲ್ಪ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಳಗಾವಿ) :  ಉತ್ತರ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ವಿನೂತನ ಕಾರ್ಯಕ್ರಮವನ್ನು ಕಾಂಗ್ರೆಸ್‌ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ಮೈಕ್ರೋ ಬ್ಲಾಗಿಂಗ್‌ ʼಎಕ್ಸ್‌ʼ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ನಂಜುಂಡಪ್ಪನವರ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ಈ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ ರಾಜ್ಯ ಸರ್ಕಾರ 61,330 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿದೆ. ಸುಮಾರು 42,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ನಂಜುಂಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೇಷ ಅಭಿವೃದ್ಧಿ ಯೋಜನೆಯಡಿಯೇ 32,433 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಇದರ ಜೊತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ.

ವಿಶೇಷವಾಗಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!