spot_img
Friday, April 24, 2026
spot_img

ಆನೆಗುಡ್ಡೆ ಸಂಭ್ರಮದ ಬ್ರಹ್ಮರಥೋತ್ಸವ


ಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮರಥೋತ್ಸವ ಮತ್ತು ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ ಡಿಸೆಂಬರ್ 16 ಶನಿವಾರ ನಡೆಯಿತು. ರಥೋತ್ಸವದಂದು ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶ್ರೀದೇವರ ದರ್ಶನ ಪಡೆದರು. ವಿಜೃಂಭಣೆಯಿಂದ ಬ್ರಹ್ಮರಥೋತ್ಸವ ಮತ್ತು ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ ಸಂಪನ್ನಗೊಂಡಿತು. ಮದ್ಯಾಹ್ನ ಅನ್ನಸಂತರ್ಪಣೆ, ಸಂಜೆ ರಥೋತ್ಸವ, ಸುಡುಮದ್ದು ಪ್ರದರ್ಶನ ನಡೆಯಿತು. ರಾತ್ರಿ ಸಾಲಿಗ್ರಾಮ ಮೇಳದವರಿಂದ ಯಕ್ಷಗಾನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ.ರಮಣ ಉಪಾಧ್ಯಾಯ, ಅನುವಂಶಿಕ ಪರ್ಯಾಯ ಅರ್ಚಕರಾದ ಕೆ.ಶ್ರೀಶ ಉಪಾಧ್ಯಾಯ, ಅನುವಂಶಿಕ ಧರ್ಮದರ್ಶಿ ಕೆ.ವಿಠಲ ಉಪಾಧ್ಯಾಯ, ಕೆ.ನಿರಂಜನ ಉಪಾಧ್ಯಾಯ ಉಪಸ್ಥಿತರಿದ್ದರು.

ಡಿ.13ರಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು ರಾತ್ರಿ ಗಣಹೋಮ, ರಂಗಪೂಜೆ, ಡೋಲಾರೋಹಣ, ಪಲ್ಲಕ್ಕಿ ಉತ್ಸವ, ಡಿ.14ರಂದು ಮಹಾಪೂಜೆ, ಪುರಮೆರವಣಿಗೆ, ರಂಗಪೂಜೆ, ಪಲ್ಲಕ್ಕಿ ಉತ್ಸವ, ಡಿ.15ರಂದು ರಾತ್ರಿ ಪುರಮೆರವಣಿಗೆ, ರಂಗಪೂಜಾ, ಸುವರ್ಣ ಪಲ್ಲಕ್ಕಿ ಉತ್ಸವ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬ್ರಹ್ಮರಥೋತ್ಸವಕ್ಕಾಗಿ ಅನೆಗುಡ್ಡೆ ಸರ್ವಾಂಗ ಸುಂದರಗೊಂಡಿತು. ವಿದ್ಯುತ್ ದೀಪಾಲಂಕಾರಗಳಿಂದ ಝಗಮಗಿಸುತ್ತಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!