spot_img
Friday, April 24, 2026
spot_img

ಪತ್ರಿಕೆಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು: ಜಯಪ್ರಕಾಶ್ ಹೆಗ್ಡೆ

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

ಕೋಟ: ಪತ್ರಿಕೆಗಳು ವಾಸ್ತವಾಂಶಗಳಿಗೆ ಒತ್ತು ನೀಡಬೇಕು ಹಾಗೂ ನೇರ ನಿಷ್ಠುರವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ‌ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ಅವರು ಕೋಟ ಸಹಕಾರಿ ವ್ಯವಸಾಯಿಕ ಸಂಘದ ಬಿ.ಸಿ.ಹೊಳ್ಳ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಡಿ.೧೭ರಂದು ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಪತ್ರಕರ್ತ ಜೋಗಿ ಅಭಿನಂದನಾ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿಶ್ವೇಶ್ವರ ಭಟ್ ಅವರ ಕೊಡುಗೆ ಅಪಾರವಾದದ್ದು. ಈ ಕ್ಷೇತ್ರಕ್ಕೆ ಹೊಸತನ ಹಾಗೂ ನವ ಆಯಾಮ ನೀಡಿದ ಸಾಧನೆ ಇವರಿಗೆ ಸಲ್ಲಬೇಕು ಎಂದರು.

ಪತ್ರಕರ್ತ ವಿಶ್ವೇಶ್ವರ ಭಟ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಡ್ಡರ್ಸೆ ರಘುರಾಮ ಶೆಟ್ಟರ ಕೊಡುಗೆ ಅದ್ಬುತವಾದದ್ದು. ಬ್ರಹ್ಮಾವರ ಪತ್ರಕರ್ತ ಸಂಘ ಅವರ ಹೆಸರಲ್ಲಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ. ನಮ್ಮ ಸರಕಾರ ವಡ್ಡರ್ಸೆ ಹೆಸರಲ್ಲಿ ಟಿ.ಎಸ್.ಆರ್. ಮಾದರಿಯ ಪ್ರಶಸ್ತಿ ನೀಡಬೇಕು ಎಂದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಿದರು.
ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭ ಹಿರಿಯ ಪತ್ರಕರ್ತ ಹಾಗೂ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಕೋಟ ಶ್ರೀನಿವಾಸ ಪೂಜಾರಿ, ಕೋಟ ಸಿ.ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಹಮ್ಮದ್ ಶರೀಫ್, ಬೈಂದೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಂದುಕಾ ಎ.ಎಸ್, ಹೆಬ್ರಿಯ ಸುಕುಮಾರ್ ಮುನಿಯಾಲು, ಕುಂದಾಪುರದ ನಾಗರಾಜ್ ರಾಯಪ್ಪನಮಠ ಉಪಸ್ಥಿತರಿದ್ದರು.

ಇತ್ತೀಚೆಗೆ ನಿಧನರಾದ ಪತ್ರಕರ್ತರಾದ ಶೇಖರ್ ಅಜೆಕಾರು ಮತ್ತು ಶಶಿಧರ ಹೆಮ್ಮಣ್ಣ ಅವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಶೇಖರ ಅಜೆಕಾರು ಕುಟುಂಬದವರಿಗೆ ಆರ್ಥಿಕ ಧನಸಹಾಯ ನೀಡಲಾಯಿತು.

ಶಿವಾನಂದ ತಗಡೂರು ಮತ್ತು ಜೋಗಿ ಅವರನ್ನು ಗೌರವಿಸಲಾಯಿತು. ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ಸಮಾರಂಭದ ಸಂಚಾಲಕ ವಸಂತ ಗಿಳಿಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿದರು, ಕಾರ್ಯದರ್ಶಿ ಹರೀಶ ಕಿರಣ್ ಕುಮಾರ್ ತುಂಗ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!