Sunday, September 8, 2024

ಭ್ರೂಣ ಹತ್ಯೆ ಸುಳಿವು ಕೊಟ್ಟರೇ 1 ಲಕ್ಷ ಬಹುಮಾನ : ಆರೋಗ್ಯ ಇಲಾಖೆ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ ರೂ. 1 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಮಾತ್ರವಲ್ಲದೇ,  ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

ಬಿಜೆಪಿ ಸರ್ಕಾರದ ಅವಧಿಯಿಂದಲೂ ರಾಜ್ಯದಲ್ಲಿ ಭ್ರೂಣ ಹತ್ಯೆ ವ್ಯಾಪಕವಾಗಿ ನಡೆಯುತ್ತಿತ್ತು, ನಮ್ಮ ಸರ್ಕಾರ ಬಂದಿದ್ದೇ ತಡ ಈ ಅನಿಷ್ಠ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ ಘೋಷಿಸುವ ಮೂಲಕ ಭ್ರೂಣ ಹತ್ಯೆಯನ್ನು ತಡೆಗಟ್ಟಲು ಮಹತ್ವದ ಹೆಜ್ಜೆ ಇಡಲಾಗಿದೆ.

ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಸಹಾಯವಾಣಿ ತೆರೆದಿದ್ದು, 080-25202264/65ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ. 

ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಲಿಂಗ ಪತ್ತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಚಿವರು, ಕಳೆದ ವರ್ಷ 1,000 ಪುರುಷರಿಗೆ 947 ಮಹಿಳೆಯರಿದ್ದರು. ಈ ವರ್ಷ 929 ಇದ್ದಾರೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ ಎಂದರು.
 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!